×
Ad

SDPI ವತಿಯಿಂದ ಕುಟುಂಬ ಸಮ್ಮಿಲನ, ಸ್ನೇಹಕೂಟ ಕಾರ್ಯಕ್ರಮ

Update: 2025-08-27 22:54 IST

ಬೆಳ್ತಂಗಡಿ: ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಮಂಗಳೂರು ಗ್ರಾಮಾಂತರ ಸಮಿತಿ ಆಯೋಜಿಸಿದ ನಾಯಕರ ಕುಟುಂಬ ಸಮ್ಮಿಲನ ಮತ್ತು ಸ್ನೇಹ ಕೂಟವು ಬೆಳ್ತಂಗಡಿ ತಾಲೂಕಿನ ಮದ್ದಡ್ಕದ ಎಫ್ ಎಮ್ ಗಾರ್ಡನ್ ನಲ್ಲಿ ನಡೆಯಿತು.

ಕಾರ್ಯಕ್ರಮದಲ್ಲಿ ಮಕ್ಕಳಿಗೆ, ಮಹಿಳೆಯರಿಗೆ, ಯುವಕರಿಗೆ ವಿವಿಧ ಕ್ರೀಡಾ ಸ್ಪರ್ಧೆಗಳನ್ನು, ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಏರ್ಪಡಿಸಲಾಗಿತ್ತು. ದಫ್ಫ್ ಮತ್ತು ಶಾಲಾ ಮಕ್ಕಳ ಮಾರ್ಷಲ್ ಆರ್ಟ್ಸ್ ಹಾಗೂ ಇತರ ಸ್ಪರ್ಧೆಗಳು ನಡೆಯಿತು.

ಜಿಲ್ಲಾಧ್ಯಕ್ಷರಾದ ಅನ್ವರ್ ಸಾದತ್ ರವರ ಅಧ್ಯಕ್ಷತೆಯಲ್ಲಿ ನಡೆದ ಸಭಾ ಕಾರ್ಯಕ್ರಮದಲ್ಲಿ ಮಹಿಳೆಯರ ಸಾಮಾಜಿಕ ಮತ್ತು ರಾಜಕೀಯ ಜವಾಬ್ದಾರಿ ಎಂಬ ವಿಷಯದಲ್ಲಿ ವಿಮೆನ್ ಇಂಡಿಯಾ ಮೂವ್ಮೆಂಟ್ ರಾಜ್ಯಾಧ್ಯಕ್ಷೆ ಫಾತಿಮಾ ನಸೀಮಾ ತರಗತಿ ನಡೆಸಿದರು. ಕುಟುಂಬದ ಸಾಮಾಜಿಕ ಜವಾಬ್ದಾರಿ ಎಂಬ ವಿಚಾರದಲ್ಲಿ ಅಕ್ಬರ್ ಅಲಿ ಪೊನ್ನೋಡಿಯವರು ವಿಚಾರ ಮಂಡಿಸಿದರು. ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸಿದ್ದೀಕ್ ಪುತ್ತೂರು ಸಮಾರೋಪ ಭಾಷಣ ಮಾಡಿದರು.

ವೇದಿಕೆಯಲ್ಲಿ SDPI ರಾಜ್ಯ ಉಪಾಧ್ಯಕ್ಷೆ ಶಾಹಿದಾ ತಸ್ನೀಂ, WIM ರಾಜ್ಯ ಪ್ರಧಾನ ಕಾರ್ಯದರ್ಶಿ ನಸ್ರಿಯಾ ಬೆಳ್ಳಾರೆ, SDPI ರಾಜ್ಯ ಸಮಿತಿ ಸದಸ್ಯರಾದ ನ್ಯಾಯವಾದಿ ಅಶ್ರಫ್ ಅಗ್ನಾಡಿ ಮತ್ತು ಮಿಸ್ರಿಯಾ ಕಣ್ಣೂರು, ಜಿಲ್ಲಾ ಕೋಶಾಧಿಕಾರಿ ರಹೀಮ್ ಇಂಜಿನಿಯರ್, ಜಿಲ್ಲಾ ಸಮಿತಿ ಸದಸ್ಯರುಗಳಾದ ಹನೀಫ್ ಪುಂಜಾಲಕಟ್ಟೆ, ಅಬೂಬಕ್ಕರ್ ಮದ್ದ, ಝೀನತ್ ಗೂಡಿನಬಳಿ, ರಹ್ಮಾನ್ ನಾವೂರು, ನ್ಯಾಯವಾದಿ ಕಬೀರ್ ಕೆಮ್ಮಾರ, ವಿಮ್ ಜಿಲ್ಲಾಧ್ಯಕ್ಷೆ ಶಿನೀರಾ, ಬಂಟ್ವಾಳ ವಿಧಾನಸಭಾ ಕ್ಷೇತ್ರಾಧ್ಯಕ್ಷ ಸಾಹುಲ್ ಎಸ್ ಎಚ್, ಪುತ್ತೂರು ವಿಧಾನಸಭಾ ಕ್ಷೇತ್ರಾಧ್ಯಕ್ಷ ಅಶ್ರಫ್ ಬಾವು, ಸುಳ್ಯ ವಿಧಾನಸಭಾ ಕ್ಷೇತ್ರಾಧ್ಯಕ್ಷ ಮಿರಾಝ್ ಸುಳ್ಯ ಉಪಸ್ಥಿತರಿದ್ದರು.

ಜಿಲ್ಲಾ ಕಾರ್ಯದರ್ಶಿ ಅಶ್ರಫ್ ತಲಪಾಡಿ ಕಾರ್ಯಕ್ರಮ ನಿರೂಪಿಸಿದರು. ಬೆಳ್ತಂಗಡಿ ವಿಧಾನಸಭಾ ಕ್ಷೇತ್ರಾಧ್ಯಕ್ಷ ಅಕ್ಬರ್ ಬೆಳ್ತಂಗಡಿ ಸ್ವಾಗತಿಸಿದರೆ, ಕಾರ್ಯಕ್ರಮದ ಸಂಚಾಲಕರಾದ ನವಾಝ್ ಶರೀಫ್ ಕಟ್ಟೆ ಧನ್ಯವಾದ ಸಮರ್ಪಿಸಿದರು.







 


 


 


Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News