ಬಂಟ್ವಾಳ: ನ್ಯಾಯಾಧೀಶೆ ಭಾಗ್ಯಮ್ಮ ಅವರಿಗೆ ಬೀಳ್ಕೊಡುಗೆ
Update: 2025-05-22 18:14 IST
ಬಂಟ್ವಾಳ: ಬಂಟ್ವಾಳ ವಕೀಲರ ಸಂಘದ ವತಿಯಿಂದ ಇಲ್ಲಿನ ಹಿರಿಯ ಸಿವಿಲ್ ಮತ್ತು ಜೆ.ಎಂ.ಎಫ್.ಸಿ ನ್ಯಾಯಾಲಯದ ನ್ಯಾಯಾಧೀಶೆ ಭಾಗ್ಯಮ್ಮ ಅವರಿಗೆ ಗೌರವಾಭಿನಂದನೆ ಮತ್ತು ಬೀಳ್ಕೊಡುಗೆ ಸಮಾರಂಭ ನಡೆಯಿತು.
ಭಾಗ್ಯಮ್ಮ ಅವರು ಮೂರು ವರ್ಷಗಳ ಕಾಲ ಕರ್ತವ್ಯ ನಿರ್ವಹಿಸಿ ಇದೀಗ ಹುಣಸೂರು ನ್ಯಾಯಾಲಯಕ್ಕೆ ವರ್ಗಾವಣೆಗೊಂಡಿದ್ದಾರೆ. ಭಾಗ್ಯಮ್ಮ ಅವರ ಸೇವೆಯನ್ನು ಗುರುತಿಸಿ ಸಂಘದ ಕಛೇರಿಯಲ್ಲಿ ಸನ್ಮಾನಿಸಲಾಯಿತು.
ಬಂಟ್ವಾಳ ವಕೀಲರ ಸಂಘದ ಅಧ್ಯಕ್ಷ ರಿಚರ್ಡ್ ಕೋಸ್ತಾ ಎಂ. ಅಧ್ಯಕ್ಷತೆ ವಹಿಸಿದ್ದರು.
ಈ ಸಂದರ್ಭ ಹೆಚ್ಚುವರಿ ಸಿವಿಲ್ ಮತ್ತು ಜೆ.ಎಂ.ಎಫ್.ಸಿ ನ್ಯಾಯಾಧೀಶರಾದ ಕೃಷ್ಣಮೂರ್ತಿ ಎನ್., ಪ್ರದಾನ ಕಾರ್ಯದರ್ಶಿ ಕೆ. ನರೇಂದ್ರ ನಾಥ್ ಭಂಡಾರಿ ಮೊದಲಾದವರು ಉಪಸ್ಥಿತರಿದ್ದರು.
ಸಂಘದ ಉಪಾಧ್ಯಕ್ಷ ದಯಾನಂದ ರೈ ಸ್ವಾಗತಿಸಿ, ಪ್ರಧಾನ ಕಾರ್ಯದರ್ಶಿ ಕೆ.ನರೇಂದ್ರ ಭಂಡಾರಿ ವಂದಿಸಿದರು. ವಕೀಲೆ ಸ್ವರ್ಣ ಗೌರಿ ಕಾರ್ಯಕ್ರಮ ನಿರೂಪಿಸಿದರು.