×
Ad

ಗುಡ್ಡ ಜರಿಯುವ ಭೀತಿ: ಮೂರು ಕುಟುಂಬ ಸ್ಥಳಾಂತರ

Update: 2024-09-24 21:45 IST

ಉಳ್ಳಾಲ: ಕಳೆದೆರಡು ದಿನಗಳಿಂದ ಸುರಿದ ಮಳೆಗೆ ಉಳ್ಳಾಲ ನಗರ ಸಭೆ ವ್ಯಾಪ್ತಿಯ ಹಳೆ ಕೋಟೆ ಎಂಬಲ್ಲಿ ಮನೆಯ ಅವರಣ ಗೋಡೆ ಮೇಲೆ ಮಣ್ಣು ಕುಸಿದು ಬಿದ್ದಿದೆ. ಇದರಿಂದ ಎರಡು ಮನೆಗಳು ಅಪಾಯದಲ್ಲಿದ್ದು, ಗುಡ್ಡ ಕುಸಿಯುವ ಭೀತಿ ಎದುರಾಗಿದೆ. ಮುಂಜಾಗ್ರತಾ ಕ್ರಮವಾಗಿ ಮೂರು ಕುಟುಂಬಗಳನ್ನು ಸ್ಥಳಾಂತರಿಸಲಾಗಿದ್ದು, ಅವರು ಸಂಬಂಧಿಕರ ಮನೆಗೆ ತೆರಳಿದ್ದಾರೆ.

ಸ್ಥಳಕ್ಕೆ ಉಳ್ಳಾಲ ಪುರಸಭೆ ಅಧಿಕಾರಿಗಳು ಭೇಟಿ ನೀಡಿದ್ದು ಜೆಸಿಬಿ ಮೂಲಕ ಮಣ್ಣು ತೆರವುಗೊಳಿಸಲಾಗಿದೆ. ಈ ಘಟನೆ ಯಿಂದ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ ಎಂದು ಪೌರಾಯುಕ್ತ ಮತಡಿ ತಿಳಿಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News