ಫೆ.7-8: ಉಚಿತ ಶ್ರವಣ ತಪಾಸಣಾ ಶಿಬಿರ
ಮಂಗಳೂರು, ಫೆ.3: ಟೀಮ್ ಈಶ್ವರ್ ಮಲ್ಪೆ ಅವರ ವೈದ್ಯಕೀಯ ತಂಡ ದಕ್ಷಿಣ ಕನ್ನಡ ಕಾರ್ಯನಿರತ ಪತ್ರಕರ್ತರ ಸಂಘದ ಸಹಯೋಗದಲ್ಲಿ, ಮಂಗಳೂರು ಪ್ರೆಸ್ ಕ್ಲಬ್ ಮತ್ತು ಪತ್ರಿಕಾ ಭವನ ಟ್ರಸ್ಟ್ ಸಹಕಾರದೊಂದಿಗೆ 7 ಮತ್ತು 8 ಫೆಬ್ರವರಿ 2026 ರಂದು ಉಚಿತ ಶ್ರವಣ ತಪಾಸಣಾ ಶಿಬಿರ ಆಯೋಜಿಸಲಾಗಿದೆ. ಬೆಳಗ್ಗೆ 9.30ರಿಂದ ಸಂಜೆ 4.30ರವರೆಗೆ ಮಂಗಳೂರು ಪತ್ರಿಕಾ ಭವನದಲ್ಲಿ ಶಿಬಿರ ನಡೆಯಲಿದೆ ಎಂದು ಸಂಚಾಲಕ ಲವ ಬಂಗೇರಾ ತಿಳಿಸಿದ್ದಾರೆ.
ಈ ಶಿಬಿರದಲ್ಲಿ ಕಿವಿಯ ಶ್ರವಣ ತಪಾಸಣೆ, ಶ್ರವಣ ಯಂತ್ರಕ್ಕೆ ಸಹಾಯಧನ ಹಾಗೂ ವಿತರಣೆ ಕಾರ್ಯಕ್ರಮಗಳು ನಡೆಯಲಿವೆ. ಪತ್ರಕರ್ತರ ಕುಟುಂಬದ ಸದಸ್ಯರು, ಹಿರಿಯ ನಾಗರಿಕರು ಸೇರಿದಂತೆ ಎಲ್ಲಾ ಸಾರ್ವಜನಿಕರು ಉಚಿತ ತಪಾಸಣೆ ಪಡೆಯಬಹುದಾಗಿದೆ.
ಶ್ರವಣದ ಸಮಸ್ಯೆಯಿಂದ ಬಳಲುತ್ತಿರುವ ರೋಗಿಗಳಿಗೆ ಟೀಮ್ ಈಶ್ವರ್ ಮಲ್ಪೆ ಶ್ರವಣ ಯಂತ್ರದ (Hearing Machine) ವೆಚ್ಚದ 40% ಮೊತ್ತವನ್ನು ಭರಿಸುತ್ತಿದೆ. ಮೊದಲ 30 ನೋಂದಾಯಿತ ವ್ಯಕ್ತಿಗಳು ಮಾತ್ರ ಈ ಸೌಲಭ್ಯವನ್ನು ಬಳಸಿಕೊಳ್ಳಬಹುದು. ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಆಶ್ರಯದಲ್ಲಿ ನಡೆದ ಹಿಂದಿನ ಶಿಬಿರದಲ್ಲಿ 68 ಮಂದಿ ತಪಾಸಣೆಗೆ ಒಳಗಾಗಿದ್ದರು.
ಅಂತಾರಾಷ್ಟ್ರೀಯ ಸಂಸ್ಥೆಯಲ್ಲಿ ಅನುಭವ ಪಡೆದಿರುವ ವೈದ್ಯರು ಈ ಶಿಬಿರದಲ್ಲಿ ಪಾಲ್ಗೊಳ್ಳಲಿದ್ದಾರೆ. ಹೆಚ್ಚಿನ ಮಾಹಿತಿಗಾಗಿ +91 89518 04399 ಕ್ಕೆ ಕರೆಮಾಡಬಹುದಾಗಿದೆ. ಸಾರ್ವಜನಿಕರು ಈ ಸೌಲಭ್ಯವನ್ನು ಬಳಸಿಕೊಳ್ಳಬಹುದಾಗಿದೆ ಎಂದು ಲವ ಬಂಗೇರಾ ತಿಳಿಸಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ದಕ್ಷಿಣ ಕನ್ನಡ ಕಾರ್ಯನಿರತ ಪತ್ರಕರ್ತ ರ ಸಂಘದ ಅಧ್ಯಕ್ಷ ಪುಷ್ಪರಾಜ್ ಬಿ.ಎನ್,ಮಂಗಳೂರು ಪ್ರೆಸ್ ಕ್ಲಬ್ ಅಧ್ಯಕ್ಷ ಪಿ.ಬಿ.ಹರೀಶ್ ರೈ,ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯ ಕಾರ್ಯಕಾರಿ ಸಮಿತಿ ಸದಸ್ಯ ಶ್ರೀನಿವಾಸ ನಾಯಕ್ ಇಂದಾಜೆ,ಶ್ರವಣ ತಜ್ಞೆ ಡಾ. ಅಂಕಿತಾ ಉಪಸ್ಥಿತರಿದ್ದರು.