×
Ad

ಮಂಗಳೂರು ಜೈಲಿನಲ್ಲಿ ಮತ್ತೆ ಕೈದಿಗಳ ಮಧ್ಯೆ ಹೊಡೆದಾಟ

Update: 2025-06-26 16:59 IST

File Photo

ಮಂಗಳೂರು: ನಗರದ ಕೋಡಿಯಾಲ್‌ಬೈಲ್‌ನಲ್ಲಿರುವ ಕೇಂದ್ರ ಕಾರಾಗೃಹದಲ್ಲಿ ಕೈದಿಗಳ ಮಧ್ಯೆ ಗುರುವಾರ ಮತ್ತೆ ಹೊಡೆದಾಟ ನಡೆದಿರುವ ಬಗ್ಗೆ ವರದಿಯಾಗಿದೆ.

ಉಳ್ಳಾಲದ ಮುಕ್ತಾರ್ ಮತ್ತು ಇತರ ಕೈದಿಗಳ ಮಧ್ಯೆ ಕ್ಷುಲ್ಲಕ ಕಾರಣಕ್ಕೆ ಜೈಲಿನಲ್ಲಿ ಹೊಡೆದಾಟ ನಡೆದಿದೆ ಎನ್ನಲಾಗಿದೆ. ಕೈದಿ ಮುಕ್ತಾರ್ ಮತ್ತೊಬ್ಬ ಕೈದಿ ಕೇಶವ ಎಂಬಾತನಿಗೆ ಹಲ್ಲೆ ನಡೆಸಿದ್ದಾನೆ ಎಂದು ತಿಳಿದು ಬಂದಿದೆ. ಹಲ್ಲೆಗೊಳಗಾದ ಕೇಶವನನ್ನು ನಗರದ ವೆನ್ಲಾಕ್ ಆಸ್ಪತ್ರೆಗೆ ದಾಖಲಿಸಲಾಗಿದೆ.

2023ರ ನ.6ರಂದು ನಡೆದಿದ್ದ ಪುತ್ತೂರಿನ ಅಕ್ಷಯ್ ಕಲ್ಲೇಗ ಕೊಲೆ ಪ್ರಕರಣದ ಆರೋಪಿ ಕೇಶವನಿಗೆ ಉಳ್ಳಾಲ ಧರ್ಮನಗರದ ನಿವಾಸಿಯಾಗಿರುವ ಮುಕ್ತಾರ್ ಹಲ್ಲೆ ನಡೆಸಿದ್ದಾನೆ ಎನ್ನಲಾಗಿದೆ. ಮುಕ್ತಾರ್‌ ವಿರುದ್ಧ  15 ಪ್ರಕರಣಗಳು ದಾಖಲಾಗಿವೆ.

ಜೈಲಿಗೆ ಮಂಗಳೂರು ಕೇಂದ್ರ ಉಪವಿಭಾಗದ ಎಸಿಪಿ ಮತ್ತು ಬರ್ಕೆ ಠಾಣೆಯ ಪೊಲೀಸರು ಭೇಟಿ ನೀಡಿದ್ದು, ಪರಿಶೀಲನೆ ನಡೆಸುತ್ತಿದ್ದಾರೆ. ಘಟನೆಯ ಬಗ್ಗೆ ಬರ್ಕೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News