×
Ad

ಪಟಾಕಿ ಸಿಡಿಸುವ ಮುನ್ನ ನಿಯಮ ಪಾಲಿಸಿ: ಮನಪಾ ಉಪಾಯುಕ್ತ ಸೂಚನೆ

Update: 2023-11-04 19:06 IST

ಮಂಗಳೂರು: ಮಹಾನಗರಪಾಲಿಕೆ ವ್ಯಾಪ್ತಿಯಲ್ಲಿ ದೀಪಾವಳಿ, ತುಳಸಿಪೂಜೆ ಮತ್ತು ಕ್ರಿಸ್ಮಸ್ ಹಬ್ಬಗಳ ಸಂದರ್ಭ ಪಟಾಕಿ ಗಳ ಮಾರಾಟ ಮತ್ತು ಬಳಕೆ ನಿಯಂತ್ರಿಸುವ ಬಗ್ಗೆ ಸರ್ವೋಚ್ಚ ನ್ಯಾಯಾಲಯದ ಆದೇಶದಲ್ಲಿ ತಿಳಿಸಿದಂತೆ ಹಬ್ಬಗಳ ಸಂದರ್ಭ ಹಸಿರು ಪಟಾಕಿಗಳು ಮಾತ್ರ ಬಳಸಬೇಕು. ಪಟಾಕಿಗಳನ್ನು ಬಳಸುವಾಗ ಯಾವುದೇ ಪ್ರಾಣಿ, ಪಕ್ಷಿ, ಮಕ್ಕಳು, ವೃದ್ದರಿಗೆ ತೊಂದರೆಯಾಗದಂತೆ ಎಚ್ಚರ ವಹಿಸಬೇಕು ಎಂದು ಮಂಗಳೂರು ಮನಪಾ ಉಪಾಯುಕ್ತ (ಕಂದಾಯ) ಸೂಚನೆ ನೀಡಿದ್ದಾರೆ.

ಪಟಾಕಿ ಹಚ್ಚುವ ವೇಳೆ ಯಾವುದೇ ಸ್ಥಳೀಯ ಆಸ್ಪತ್ರೆ ಹಾಗೂ ಶಿಕ್ಷಣ ಸಂಸ್ಥೆ ಸುತ್ತಮುತ್ತಲಿನ ಹಾಗೂ ನಿಷೇಧಿತ ವಲಯದಲ್ಲಿ ಬಳಸುವಂತಿಲ್ಲ ಮತ್ತು ಮಾರಾಟ ಮಾಡುವಂತಿಲ್ಲ. ಹಸಿರು ಪಟಾಕಿ ಮತ್ತು ಪ್ಯಾಕೇಟ್‌ಗಳ ಮೇಲೆ ಹಸಿರು ಪಟಾಕಿ ಚಿಹ್ನೆ ಇರುತ್ತದೆ. ಅಲ್ಲದೆ ಕ್ಯೂಆರ್‌ಕೋಡ್ ಕೂಡ ಇರುತ್ತದೆ. ಹಬ್ಬಗಳ ಸಂದರ್ಭ ರಾತ್ರಿ 8ರಿಂದ 10ರವರೆಗೆ ಮಾತ್ರ ಹಸಿರು (ಕಡಿಮೆ ಶಬ್ದ ಮಾಡುವ ) ಪಟಾಕಿ, ಸುಡುಮದ್ದು ಸಿಡಿಸುವುದಕ್ಕೆ ಸರ್ವೋಚ್ಚ ನ್ಯಾಯಾಲಯವು ಅನುಮತಿ ನೀಡಿದೆ. ಉಳಿದ ವೇಳೆ ಪಟಾಕಿ ಸುಡುಮದ್ದುಗಳನ್ನು ಸಿಡಿಸುವುದನ್ನು ನಿಷೇಧಿಸಲಾಗಿದೆ. ಕಡ್ಡಾಯವಾಗಿ ಪರಿಸರ ಸ್ನೇಹಿ ಹಸಿರು ಪಟಾಕಿ ಗಳನ್ನು ಮಾತ್ರ ಬಳಸಬೇಕು ಎಂದು ಸೂಚನೆ ನೀಡಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News