×
Ad

ಗಾಂಜಾ ಸಾಗಾಟ ಪ್ರಕರಣ: ಆರೋಪಿ ಸೆರೆ

Update: 2023-09-16 22:37 IST

ವಿಟ್ಲ: ಕರ್ನಾಟಕ ಕೇರಳ ಗಡಿಭಾಗದಲ್ಲಿ ರಿಕ್ಷಾವೊಂದರಲ್ಲಿ ಗಾಂಜಾ ಸಾಗಾಟ ಮಾಡುತ್ತಿದ್ದುದನ್ನು ವಿಟ್ಲ ಪೊಲೀಸರು ಪತ್ತೆ ಹಚ್ಚಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಸುಳ್ಯ ನಿವಾಸಿ ಕಲಂದರ್ ಶಾ (36) ಎಂಬಾತನನ್ನು ವಶಕ್ಕೆ ಪಡೆಯಲಾಗಿದೆ. ಕಲ್ಲಡ್ಕ ಸಾರಡ್ಕ ರಸ್ತೆಯ ಕೇಪು ಗ್ರಾಮದ ಮರಕ್ಕಿಣಿ ಎಂಬಲ್ಲಿ ಅಟೋರಿಕ್ಷಾದಲ್ಲಿ ಗಾಂಜಾವನ್ನು ಸಾಗಾಟ ಮಾಡುತ್ತಿದ್ದ ಬಗ್ಗೆ ಮಾಹಿತಿಯ ಆಧಾರದಲ್ಲಿ ಪತ್ತೆ ಹಚ್ಚಿದ್ದಾರೆ.

ರಿಕ್ಷಾದಲ್ಲಿ 6.110 ಕೆ ಜಿ ತೂಕದ ಗಾಂಜಾ ಪತ್ತೆಯಾಗಿದ್ದು, ಆರೋಪಿಯಲ್ಲಿದ್ದ ಎರಡು ಮೊಬೈಲ್ ಫೊನ್, 900ರೂ ನಗದು, ಚಾಲನಾ ಪರವಾನಿಗೆ ಹಾಗೂ ರಿಕ್ಷಾವನ್ನು ವಶಕ್ಕೆ ಪಡೆದು ಪ್ರಕರಣ ದಾಖಲಿಸಿಕೊಂಡಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News