×
Ad

ಸರಕಾರಿ ಪ್ರಥಮ ದರ್ಜೆ ಕಾಲೇಜು ಮುಡಿಪು | ರಾಷ್ಟ್ರೀಯ ಸೇವಾ ಯೋಜನೆ ವಾರ್ಷಿಕ ವಿಶೇಷ ಶಿಬಿರ

Update: 2025-02-21 08:56 IST

ಮುಡಿಪು: ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಮುಡಿಪು ಇಲ್ಲಿಯ ರಾಷ್ಟ್ರೀಯ ಸೇವಾ ಯೋಜನೆ ಯ 2024 25ನೇ ಸಾಲಿನ ವಾರ್ಷಿಕ ವಿಶೇಷ ಶಿಬಿರ ದ. ಕ. ಹಿ. ಪ್ರಾ. ಶಾಲೆ ಬೋಳ್ಯಾರು ಇಲ್ಲಿ ಫೆ. 20 ರಂದು ನಡೆಯಿತು.

ವಾಣಿಜ್ಯ ವಿಭಾಗದ ಮುಖ್ಯಸ್ಥ ಸಹ ಪ್ರಾಧ್ಯಾಪಕ ಪ್ರೊ. ಹೈದರಾಲಿ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮವನ್ನು ಕಾಲೇಜು ಅಭಿವೃದ್ಧಿ ಸಮಿತಿ ಕಾರ್ಯಾಧ್ಯಕ್ಷ ಪ್ರಶಾಂತ್ ಕಾಜವ ಉದ್ಘಾಟಿಸಿದರು. ಬೋಳಿಯಾರು ಪಂಚಾಯತ್ ಅಭಿವೃದ್ಧಿ ಅಧಿಕಾರಿ ಸುಧಾರಾಣಿ ಪ್ರತಿಜ್ಞಾ ವಿಧಿ ಬೋಧಿಸಿದರು.

ಬೋಳಿಯಾರು ಪಂಚಾಯತ್ ಅಧ್ಯಕ್ಷ ಅಬ್ದುಲ್ ಶಕೂರ್, ಮಂಗಳೂರು ತಾಲೂಕು ಪಂಚಾಯತ್ ಮಾಜಿ ಉಪಾಧ್ಯಕ್ಷ ಅಬ್ದುಲ್ ಜಬ್ಬಾರ್, ಶಾಲಾ ಅಭಿವೃದ್ಧಿ ಸಮಿತಿಯ ಅಧ್ಯಕ್ಷೆ ಝೊಹರ, ಸದಸ್ಯರಾದ ಸಫಿಯ, ಬೀಫಾತಿಮಾ ಹಾಗೂ ಬೋಳಿಯಾರು ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷೆ ಜಸಿಂತ ಉಪಸ್ಥಿತರಿದ್ದರು.

 ಶಿಬಿರಾಧಿಕಾರಿ, ಕನ್ನಡ ವಿಭಾಗದ ಸಹಾಯಕ ಪ್ರಾಧ್ಯಾಪಕಿ ತನುಜಾ ಕಾರ್ಯಕ್ರಮ ಸಂಯೋಜಿಸಿದರು. ವಾಣಿಜ್ಯ ವಿಭಾಗದ ಸಹಾಯಕ ಪ್ರಾಧ್ಯಾಪಕ  ಉಸ್ಮಾನ್ ಎ ಸ್ವಾಗತಿಸಿದರು.

ಶಿಬಿರಾರ್ಥಿ ತೇಜಸ್ವಿ ಕಾರ್ಯಕ್ರಮ ನಿರೂಪಿಸಿದರು. ಅನನ್ಯ ವಂದಿಸಿದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News