×
Ad

ಗುಂಡ್ಯ: ಸರಣಿ ರಸ್ತೆ ಅಪಘಾತ; ಇಪ್ಪತ್ತಕ್ಕೂ ಹೆಚ್ಚು ಮಂದಿಗೆ ಗಾಯ

Update: 2024-11-23 07:44 IST

ಕಡಬ, ನ. 23. ಖಾಸಗಿ ಬಸ್, ಕೆಎಸ್ಸಾರ್ಟಿಸಿ ಬಸ್ ಹಾಗೂ ಕಾರಿನ ನಡುವೆ ಸರಣಿ ಅಪಘಾತ ಸಂಭವಿಸಿದ ಪರಿಣಾಮ ಇಪ್ಪತ್ತಕ್ಕೂ ಹೆಚ್ಚು ಮಂದಿ ಗಾಯಗೊಂಡ ಘಟನೆ ಮಂಗಳೂರು- ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಗುಂಡ್ಯ ಸಮೀಪದ ಅಡ್ಡಹೊಳೆ ಎಂಬಲ್ಲಿ ಶನಿವಾರದಂದು ನಸುಕಿನ ವೇಳೆ ನಡೆದಿದೆ.

ಬೆಂಗಳೂರು ಮೂಲದ ಕಾಲೇಜು ವಿದ್ಯಾರ್ಥಿಗಳು ಕುಂದಾಪುರಕ್ಕೆ ಪ್ರವಾಸಕ್ಕೆಂದು ತೆರಳಿ ಹಿಂತಿರುಗುತ್ತಿದ್ದ ವೇಳೆ ಚಾಲಕನ ನಿಯಂತ್ರಣ ತಪ್ಪಿದ ಖಾಸಗಿ ಬಸ್ ಪಲ್ಟಿಯಾಗಿ ಕೆಎಸ್ಸಾರ್ಟಿಸಿ ಬಸ್ ಗೆ ಢಿಕ್ಕಿ ಹೊಡೆದಿದೆ. ಈ ವೇಳೆ ಹಿಂದಿನಿಂದ ಬರುತ್ತಿದ್ದ ಕಾರೊಂದು ಕೆಎಸ್ಸಾರ್ಟಿಸಿ ಬಸ್ ಗೆ ಢಿಕ್ಕಿ ಹೊಡೆದು ಸರಣಿ ಅಪಘಾತ ಸಂಭವಿಸಿದೆ.

ಘಟನೆಯಲ್ಲಿ ಸುಮಾರು ಇಪ್ಪತ್ತಕ್ಕೂ ಹೆಚ್ಚುಮಂದಿ ಗಾಯಗೊಂಡಿದ್ದು, ಗಾಯಾಳುಗಳನ್ನು ನೆಲ್ಯಾಡಿ ಮತ್ತು ಕಡಬದ ಖಾಸಗಿ ಆಸ್ಪತ್ರೆಗಳಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಿ, ಹೆಚ್ಚಿನ ಚಿಕಿತ್ಸೆಗಾಗಿ ಪುತ್ತೂರು ಮತ್ತು ಮಂಗಳೂರಿನ ಖಾಸಗಿ ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ. ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿದುಬರಬೇಕಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News