×
Ad

ಗುರುಪುರ: ನದಿಗೆ ಹಾರಿ ಯುವತಿ ಆತ್ಮಹತ್ಯೆ

Update: 2026-01-05 19:49 IST

ಬಜ್ಪೆ: ಮೂಡುಬಿದಿರೆಯ ಯುವತಿ ಗುರುಪುರ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಸೋಮವಾರ ಮಧ್ಯಾಹ್ನ ನಡೆದಿದೆ.

ಮೂಡುಬಿದಿರೆ ಗಾಂಧಿನಗರ ನಿವಾಸಿ ಅಲಂಕಾರ್ ಜುವೆಲ್ಲರ್ಸ್ ಉದ್ಯೋಗಿ ನವ್ಯಾ ಆತ್ಮಹತ್ಯೆ ಮಾಡಿಕೊಂಡವರು ಎಂದು ಪೊಲೀಸರು ಮಾಹಿತಿ‌ ನೀಡಿದ್ದಾರೆ

ನವ್ಯಾ ಅವರ ಆತ್ಮಹತ್ಯೆಗೆ ಕಾರಣ ತಿಳಿದು ಬಂದಿಲ್ಲ. ಈ ಬಗ್ಗೆ ಬಜ್ಪೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಮಾಹಿತಿ ಆಧರಿಸಿ ಸ್ಥಳಕ್ಕೆ ಬಂದ ಅಗ್ನಿಶಾಮಕ ದಳ ಮತ್ತು ಎನ್‌ಡಿ ಆರ್ ಎಫ್ ಸಿಬ್ಬಂದಿ ಕಾರ್ಯಾಚರಣೆ ನಡೆಸಿ ಮೃತದೇಹವನ್ನು ಮೇಲೆತ್ತಿದ್ದಾರೆ‌ ಎಂದು ತಿಳಿದು ಬಂದಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News