ಹಂಪನಕಟ್ಟೆ: ಅಕ್ಬರ್ ಕಾಂಪ್ಲೆಕ್ಸ್‌ನಲ್ಲಿ ಆಕಸ್ಮಿಕ ಬೆಂಕಿ; ಭಾರೀ ಪ್ರಮಾಣದಲ್ಲಿ ನಷ್ಟ
Update: 2026-01-24 22:59 IST
ಸಾಂದರ್ಭಿಕ ಚಿತ್ರ
ಮಂಗಳೂರು: ನಗರದ ಹಂಪನಕಟ್ಟೆಯ ಅಕ್ಬರ್ ಕಾಂಪ್ಲೆಕ್ಸ್‌ನಲ್ಲಿ ಶನಿವಾರ ಸಂಜೆ ಬೆಂಕಿ ಕಾಣಿಸಿಕೊಂಡಿದ್ದು, ಕಟ್ಟಡದಲ್ಲಿ ತಳ ಅಂತಸ್ತಿನ ನಲ್ಲಿರುವ ಹಲವು ಅಂಗಡಿಗಳಿಗೆ ಹಾನಿಯಾಗಿದ್ದು, ಲಕ್ಷಾಂತರ ರೂ.ಗಳ ನಷ್ಟ ಸಂಭವಿಸಿದೆ.
ಅಂಡರ್ ಗ್ರೌಂಡ್‌ನಲ್ಲಿರುವ ಇಲೆಕ್ಟ್ರಾನಿಕ್ಸ್ ಅಂಗಡಿಯಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಬಟ್ಟೆ ಅಂಗಡಿಗೂ ಬೆಂಕಿಯಿಂದ ಹಾನಿ ಉಂಟಾಗಿದೆ. ಸಂಪೂರ್ಣ ಬೆಂಕಿಗಾಹುತಿಯಾಗಿದೆ. ಅಂಗಡಿಗಳಲ್ಲಿರುವ ವಸ್ತುಗಳು ಸುಟ್ಟು ಕರಕಲಾಗಿದೆ ಎಂದು ತಿಳಿದು ಬಂದಿದೆ.
ಬೆಂಕಿಯಿಂದಾಗಿ ಪರಿಸರದಲ್ಲಿ ದಟ್ಟವಾದ ಹೊಗೆ ಆವರಿಸಿದ್ದು, ಪಕ್ಕದ ಲಾಡ್ಜ್‌ನಲ್ಲಿದ್ದವರು ಇಂದರಿಂದ ತೊಂದರೆ ಅನುಭವಿಸಿದ್ದಾರೆ ಎಂದು ತಿಳಿದು ಬಂದಿದೆ.
ಪೊಲೀಸರು, ಅಗ್ನಿ ಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಧಾವಿಸಿದ್ದು ಕಾರ್ಯಾಚರಣೆ ಮುಂದುವರಿದಿದೆ. ಬೆಂಕಿಗೆ ನಿಖರವಾದ ಕಾರಣ ಇನ್ನೂ ದೃಢಪಟ್ಟಿಲ್ಲವಾದರೂ, ಶಾರ್ಟ್ ಸರ್ಕ್ಯೂಟ್ ಘಟನೆಗೆ ಕಾರಣವಾಗಿರಬಹುದು ಎಂದು ಶಂಕಿಸಲಾಗಿದೆ.