×
Ad

ರಾಜೀವ್ ಗಾಂಧಿ ಜ್ಯೋತಿ ಯಾತ್ರಾ ಸಮಿತಿಗೆ ಹನೀಫ್ ಬಗ್ಗುಮೂಲೆ, ಸಿದ್ದೀಕ್ ಸೂರ್ಯ ನೇಮಕ

Update: 2026-02-03 12:37 IST

ಬಂಟ್ವಾಳ: ರಾಜೀವ್ ಗಾಂಧಿ ಜ್ಯೋತಿ ಯಾತ್ರಾ ಸಮಿತಿಯ ರಾಷ್ಟ್ರೀಯ ಸಮಿತಿಯ ಪ್ರಧಾನ ಕಾರ್ಯದರ್ಶಿಯಾಗಿ ಅಳಕೆಮಜಲು ಸಮೀಪದ ಬಗ್ಗುಮೂಲೆ ನಿವಾಸಿ ಹನೀಫ್ ಬಗ್ಗುಮೂಲೆ ಹಾಗೂ ರಾಜ್ಯ ಉಪಾಧ್ಯಕ್ಷರಾಗಿ ಯುವ ಸಂಘಟಕ ಮತ್ತು ಯುವ ಉದ್ಯಮಿ, ಬಂಟ್ವಾಳ ತಾಲೂಕಿನ ಸೂರ್ಯ ನಿವಾಸಿ ಸಿದ್ದೀಕ್ ಸೂರ್ಯ ಅವರನ್ನು ನೇಮಕಗೊಳಿಸಲಾಗಿದೆ.

ಕಾಂಗ್ರೆಸ್ ಪಕ್ಷ ಹಾಗೂ ಮಾಜಿ ಪ್ರಧಾನಿ ದಿವಂಗತ ರಾಜೀವ್ ಗಾಂಧಿ ಅವರ ಜೀವನ, ಚಿಂತನೆ ಮತ್ತು ಕೊಡುಗೆಗಳ ಬಗ್ಗೆ ಯುವಜನತೆ, ವಿದ್ಯಾರ್ಥಿಗಳು ಮತ್ತು ಸಾರ್ವಜನಿಕರಿಗೆ ಅರಿವು ಮೂಡಿಸುವ ಉದ್ದೇಶದಿಂದ ಜ್ಯೋತಿ ಯಾತ್ರೆ ಪ್ರತಿವರ್ಷ ಕರ್ನಾಟಕ ಸೇರಿದಂತೆ ದೇಶಾದ್ಯಂತ ಸಂಚರಿಸುತ್ತದೆ. ಈ ಸಮಿತಿ ಕೆಪಿಸಿಸಿ ಅಧೀನದಲ್ಲಿ ಕಾರ್ಯನಿರ್ವಹಿಸುತ್ತಿದ್ದು, ರಾಷ್ಟ್ರೀಯ ಅಧ್ಯಕ್ಷರಾಗಿ ಆರ್. ದೊರೈವೇಲ್ ಇದ್ದಾರೆ.

ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ಮತ್ತು ಕೆಪಿಸಿಸಿ ಸಂಯೋಜಕ ಕಾವು ಹೇಮನಾಥ್ ಶೆಟ್ಟಿ ಅವರ ಶಿಫಾರಸ್ಸಿನ ಮೇರೆಗೆ ರಾಷ್ಟ್ರೀಯ ಅಧ್ಯಕ್ಷ ದೊರೈವೇಲ್ ಅವರು ನೇಮಕ ಮಾಡಿ ಅಧಿಕೃತ ಆದೇಶ ಹೊರಡಿಸಿದ್ದಾರೆ.

ಹನೀಫ್ ಬಗ್ಗುಮೂಲೆ ಅವರು ಜಿಲ್ಲಾ ಕಾಂಗ್ರೆಸ್ ಸೇವಾದಳ ಹಾಗೂ ಅಲ್ಪಸಂಖ್ಯಾತ ಘಟಕದ ಕಾರ್ಯದರ್ಶಿಯಾಗಿ, ವಿಟ್ಲ ಬ್ಲಾಕ್ ಕಾಂಗ್ರೆಸ್ ಸೇವಾದಳದ ಅಧ್ಯಕ್ಷರಾಗಿ, ಕಬಕ ಸರ್ಕಾರಿ ಶಾಲೆಯ ಎಸ್‌ಡಿಎಂಸಿ ಅಧ್ಯಕ್ಷರಾಗಿ ಸೇರಿದಂತೆ ಹಲವು ಹುದ್ದೆಗಳಲ್ಲಿ ಸೇವೆ ಸಲ್ಲಿಸಿದ್ದಾರೆ. ಇತ್ತೀಚೆಗೆ ಬಗ್ಗುಮೂಲೆ ಎಜುಕೇಶನ್ ಅಂಡ್ ಚಾರಿಟೇಬಲ್ ಟ್ರಸ್ಟ್‌ನ ಮುಖ್ಯಸ್ಥರಾಗಿ ಹಾಗೂ ಕೆಪಿಸಿಸಿ ಕಾರ್ಮಿಕ ಘಟಕದ ಕಾರ್ಯದರ್ಶಿಯಾಗಿ ಸಮಾಜಮುಖಿ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿದ್ದಾರೆ.

ಸಿದ್ದೀಕ್ ಸೂರ್ಯ ಅವರು ಅಲ್-ಅಮೀನ್ ಚಾರಿಟಿ ಗ್ರೂಪ್‌ನ ಆಡಳಿತ ನಿರ್ದೇಶಕರಾಗಿ, ಪುತ್ತೂರು ಮಿಲಾದ್ ಸಮಿತಿಯ ಉಪಾಧ್ಯಕ್ಷರಾಗಿ ಮತ್ತು ಮುಸ್ಲಿಂ ಯುವಜನ ಪರಿಷತ್ ಸದಸ್ಯರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಆರೋಗ್ಯ ಶಿಬಿರಗಳು ಸೇರಿದಂತೆ ಹಲವು ಸಾಮಾಜಿಕ ಕಾರ್ಯಕ್ರಮಗಳನ್ನು ನಿರಂತರವಾಗಿ ಆಯೋಜಿಸುವ ಮೂಲಕ ಜನಸೇವೆ ಮಾಡುತ್ತಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News