×
Ad

ಸುಳ್ಯ | ಹಾಸ್ಟೆಲ್ ನಲ್ಲಿ ಸಹಪಾಠಿ ವಿದ್ಯಾರ್ಥಿಗಳಿಂದ ಕಿರುಕುಳ: ಬಾಲಕನ ಗುಪ್ತಾಂಗಕ್ಕೆ ಗಾಯ, ಆಸ್ಪತ್ರೆಗೆ ದಾಖಲು

Update: 2024-09-21 15:14 IST

ಸುಳ್ಯ: ವಿದ್ಯಾರ್ಥಿ ನಿಲಯದಲ್ಲಿ ಉಳಿದುಕೊಂಡು ಶಾಲೆಗೆ ಹೋಗುತ್ತಿದ್ದ ಬಾಲಕನೋರ್ವನ ಗುಪ್ತಾಂಗವನ್ನು ಹಿಡಿದೆಳೆದು ಸಹಪಾಠಿ ವಿದ್ಯಾರ್ಥಿಗಳು ಗಾಯಗೊಳಿಸಿದ ಘಟನೆ ಸಂಪಾಜೆಯಲ್ಲಿ ನಡೆದಿದ್ದು, ಈ ಬಗ್ಗೆ ಪೊಲೀಸ್ ದೂರು ದಾಖಲಾಗಿದೆ.

ವಿದ್ಯಾರ್ಥಿಗಳ ಚೇಷ್ಟೆಯಿಂದ ಸಂಪಾಜೆಯ ಆಲಡ್ಕ ನಿವಾಸಿಯಾಗಿರುವ 12 ವರ್ಷ ವಯಸ್ಸಿನ ಬಾಲಕನ ಜನನಾಂಗಕ್ಕೆ ಆಂತರಿಕವಾಗಿ ಗಾಯವಾಗಿದೆ. ಗಾಯಾಳು ಬಾಲಕನನ್ನು ಮಂಗಳೂರಿನ ವೆನ್ಲಾಕ್ ಆಸ್ಪತ್ರೆಗೆ ದಾಖಲಿಸಲಾಗಿದೆ.

12 ವರ್ಷ ವಯಸ್ಸಿನ ಈ ಬಾಲಕ ಸಂಪಾಜೆಯ ಹಾಸ್ಟೆಲ್ ನಲ್ಲಿದ್ದುಕೊಂಡು ಶಾಲೆಗೆ ಹೋಗುತ್ತಿದ್ದ. ಸೆ.14ರಂದು ರಾತ್ರಿ ಹಾಸ್ಟೆಲ್ ನಲ್ಲಿ ಇಬ್ಬರು ಸಹಪಾಠಿ ವಿದ್ಯಾರ್ಥಿಗಳು ಬಾಲಕನ ಗುಪ್ತಾಂಗ ಹಿಡಿದೆಳೆದಿದು ಗಾಯಗೊಳಿಸಿದ್ದರೆನ್ನಲಾಗಿದೆ. ಬಳಿಕ ಮೂತ್ರ ವಿಸರ್ಜನೆ ಮಾಡುವ ವೇಳೆ ತೀವ್ರ ನೋವು ಕಾಣಿಸಿಕೊಂಡಿದ್ದರಿಂದ ಬಾಲಕ ಮನೆಗೆ ಬಂದಿದ್ದಾನೆ. ಮನೆಯವರು ಸುಳ್ಯದ ಸರ್ಕಾರಿ ಆಸ್ಪತ್ರೆಗೆ ಕರೆದೊಯ್ದು, ಅಲ್ಲಿಂದ ಪುತ್ತೂರಿನ ಆಸ್ಪತ್ರೆಗೆ ಕರೆದೊಯ್ದರೆಂದೂ, ಅಲ್ಲಿನ ವೈದ್ಯರ ಸಲಹೆಯ ಮೇರೆಗೆ ಮಂಗಳೂರಿನ ವೆನ್ಲಾಕ್ ಆಸ್ಪತ್ರೆಗೆ ದಾಖಲಿಸಲಾಯಿತೆಂದೂ ತಿಳಿದುಬಂದಿದೆ.

ವೆನ್ಲಾಕ್ ನಲ್ಲಿ ಶುಕ್ರವಾರ ಬಾಲಕನಿಗೆ ಶಸ್ತ್ರ ಚಿಕಿತ್ಸೆ ನಡೆಸಲಾಗಿದೆ. ಈಗ ಬಾಲಕ ಚೇತರಿಸಿಕೊಳ್ಳುತ್ತಿದ್ದಾನೆ ಎಂದು ತಿಳಿದುಬಂದಿದೆ.

ಈ ಬಗ್ಗೆ ಸಂಪಾಜೆ ಪೊಲೀಸ್ ಹೊರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News