×
Ad

ಹರೇಕಳ: ಅಪಘಾತದಲ್ಲಿ ಗಾಯಗೊಂಡಿದ್ದ ಯುವಕ ಮೃತ್ಯು

Update: 2024-07-02 12:30 IST

ಕೊಣಾಜೆ, ಜು.2: ಹರೇಕಳ ಸಮೀಪದ ಟಿಪ್ಪರ್ ಹಾಗೂ ಸ್ಕೂಟರ್ ನಡುವೆ ಸಂಭವಿಸಿದ ಅಪಘಾತದಲ್ಲಿ ಗಂಭೀರ ಗಾಯಗೊಂಡು ಆಸ್ಪತ್ರೆಗೆ ದಾಖಲಿಸಲ್ಪಟ್ಟಿದ್ದ ಮಲಾರ್ ಅಕ್ಷರ ನಗರ ನಿವಾಸಿ ವಿಶ್ವನಾಥ್ ಆಚಾರ್ಯ ಎಂಬವರ ಪುತ್ರ ಗಣೇಶ್ ಆಚಾರ್ಯ ( 27) ಮಂಗಳವಾರ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.

ಗಣೇಶ್ ಜೂ.28 ರಂದು ಬೆಳಗ್ಗೆ ಹರೇಕಳ ಕಡೆಯಿಂದ ಕೊಣಾಜೆ ಮಾರ್ಗವಾಗಿ ಹೋಗುವ ಸಂದರ್ಭ ಹರೇಕಳ ಗ್ರಾಮ ಪಂಚಾಯತ್ ಕಚೇರಿಯ ಎದುರುಗಡೆ ಅಪಘಾತ ಸಂಭವಿಸಿದೆ. ಟಿಪ್ಪರ್ ಚಾಲಕನ ಹಠಾತ್ ಬ್ರೇಕ್ ಹಾಕಿದ ಪರಿಣಾಮ ಹಿಂಬದಿಯಲ್ಲಿದ್ದ ಸ್ಕೂಟರ್ ಢಿಕ್ಕಿ ಹೊಡೆದು ಸ್ಕೂಟರ್ ಸಮೇತ ಸವಾರ ರಸ್ತೆಗೆಸೆಯಲ್ಪಟ್ಟು ಗಂಭೀರವಾಗಿ ಗಾಯಗೊಂಡಿದ್ದರು.

ಗಾಯಾಳುವನ್ನು ತಕ್ಷಣ ಟಿಪ್ಪರ್ ಚಾಲಕ ಸೇರಿದಂತೆ ಸ್ಥಳೀಯರು ನಾಟೆಕಲ್ ಕಣಚೂರು ಆಸ್ಪತ್ರೆಗೆ ದಾಖಲಿಸಿದ್ದು, ಅಲ್ಲಿಂದ ಹೆಚ್ಚಿನ ಚಿಕಿತ್ಸೆಗೆ ಅಡ್ಯಾರ್ ಫಸ್ಟ್ ನ್ಯೂರೋ ಆಸ್ಪತ್ರೆಗೆ ದಾಖಲಿಸಲಾಗಿತ್ತು.

ಮಂಗಳೂರಿನಲ್ಲಿ ಎಸಿ ಮೆಕ್ಯಾನಿಕ್ ಆಗಿ ದುಡಿಯುತ್ತಿದ್ದ ಗಣೇಶ್, ಮನೆಯ ಹಿರಿಯ ಪುತ್ರನಾಗಿದ್ದರು.

ಮೃತರು ತಾಯಿ, ತಂದೆ, ಸಹೋದರ, ಸಹೋದರಿಯನ್ನು ಅಗಲಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News