×
Ad

ದ್ವೇಷ ಭಾಷಣ ಮಸೂದೆ| ರಾಜ್ಯಪಾಲರಿಂದ ತಿರಸ್ಕೃತವಾಗಿಲ್ಲ: ಮಂಗಳೂರಿನಲ್ಲಿ ಸಿಎಂ ಸಿದ್ದರಾಮಯ್ಯ

Update: 2026-01-11 20:06 IST

ಮಂಗಳೂರು: ದ್ವೇಷ ಭಾಷಣ ಮಸೂದೆಯನ್ನು ಸರ್ವಾನುಮತದಿಂದ ಅಂಗೀಕಾರವಾಗಿದೆ. ರಾಜ್ಯಪಾಲರು ಅದನ್ನು ವಾಪಸ್ ಕಳಿಸಿಲ್ಲ, ತಿರಸ್ಕರಿಸಿಲ್ಲ, ಅಂಕಿತವನ್ನೂ ಹಾಕಿಲ್ಲ. ರಾಜ್ಯಪಾಲರು ಆಹ್ವಾನಿಸಿದಾಗ ಈ ಬಗ್ಗೆ ವಿವರಣೆ ನೀಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ರವಿವಾರ ನಗರದಲ್ಲಿ ಸುದ್ದಿಗಾರರ ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

ಬಳ್ಳಾರಿಯಿಂದ ಬಿಜೆಪಿ ಪಾದಯಾತ್ರೆ ಮಾಡುವ ಕುರಿತು ಮಾಧ್ಯಮಗಳ ಪ್ರಶ್ನೆಗೆ ಉತ್ತರಿಸಿದ ಅವರು ನಾವು ಹಿಂದೆ ಪಾದಯಾತ್ರೆ ಮಾಡಿದ್ದೆವು. ಬಳ್ಳಾರಿಯಲ್ಲಿ ಕಾನೂನುಬಾಹಿರ ಗಣಿಗಾರಿಕೆ ಮಾಡುತ್ತಿರುವ ಬಗ್ಗೆ ವಿಧಾನಸಭೆಯಲ್ಲಿ ಚರ್ಚೆ ಮಾಡಿದಾಗ ರೆಡ್ಡಿ ಸಹೋದರರು ಹಾಗೂ ಯಡಿಯೂರಪ್ಪ ಸವಾಲು ಹಾಕಿದ್ದರು. ಅದಕ್ಕಾಗಿ ಪಾದಯಾತ್ರೆ ಕೈಗೊಳ್ಳಲಾಯಿತು. ಈ ಬಿಜೆಪಿಗರು ಯಾಕೆ ಪಾದಯಾತ್ರೆ ಮಾಡಬೇಕು ಎಂದು ಪ್ರಶ್ನಿಸಿದರು.

*ಬ್ಯಾನರ್ ತೆಗೆದದ್ದು ಬಳ್ಳಾರಿ ಘಟನೆಗೆ ಪ್ರಚೋದನೆ: ಬಳ್ಳಾರಿಯಲ್ಲಿ ಮಹರ್ಷಿ ವಾಲ್ಮೀಕಿ ಪ್ರತಿಮೆ ಉದ್ಘಾಟನೆಯ ಹಿನ್ನಲೆಯಲ್ಲಿ ಹಾಕಿದ್ದ ಬ್ಯಾನರನ್ನು ತೆಗೆಯಬೇಕಾದ ಅಗತ್ಯವೇನಿತ್ತು? ಅದನ್ನು ತೆಗೆದದ್ದೆ ಘಟನೆಗೆ ಪ್ರಚೋದನೆ ಆಯಿತು. ಜನಾರ್ದನ ರೆಡ್ಡಿ , ಶ್ರೀರಾಮುಲು ಅಧಿಕಾರ ಕಳೆದುಕೊಂಡಿದ್ದರಿಂದ ಅಸೂಯೆಯಿಂದ ನಡೆದುಕೊಳ್ಳುತ್ತಿದ್ದಾರೆ ಎಂದರು.

*ಕುರ್ಚಿ ಕಾಳಗವಿಲ್ಲ: ಮುಖ್ಯಮಂತ್ರಿ ಕುರ್ಚಿ ಬಗ್ಗೆ ಕಾಳಗವೇ ಇಲ್ಲ. ಇದೆಲ್ಲಾ ಮಾಧ್ಯಮಗಳ ಸೃಷ್ಟಿ ಎಂದು ಮುಖ್ಯಮಂತ್ರಿ ಪ್ರತಿಕ್ರಿಯಿಸಿದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News