×
Ad

ನಿಟ್ಟೆ ತಾಂತ್ರಿಕ ಮಹಾ ವಿದ್ಯಾಲಯಕ್ಕೆ ತೈಹೆಯೊ, ಪ್ರೊಮ್ಯಾಕ್ ಸಂಸ್ಥೆಗಳ ಮುಖ್ಯಸ್ಥರ ಭೇಟಿ

Update: 2023-09-26 22:10 IST

ನಿಟ್ಟೆ, ಸೆ.26: ಜಪಾನ್‌ನ ತೈಹೆಯೊ ಇಂಜಿನಿಯರಿಂಗ್ ಕಾರ್ಪೊರೇಷನ್‌ನ ಹಿರಿಯ ವ್ಯವಸ್ಥಾಪಕ ನಿರ್ದೇಶಕ ಮಿಯಾಕೆ ಯೋಶಿಹಿಸಾ ಮತ್ತು ಪ್ರೊಮ್ಯಾಕ್ ಇಂಜಿನಿಯರಿಂಗ್ ಇಂಡಸ್ಟ್ರೀಸ್ ಲಿಮಿಟೆಡ್‌ನ ವಾಣಿಜ್ಯ ವಿಭಾಗದ ನಿರ್ದೇಶಕ ಕುನಾಲ್ ರೆಡ್ಡಿ ಮಂಗಳವಾರ ನಿಟ್ಟೆ ಮಹಾಲಿಂಗ ಅಡ್ಯಂತಾಯ ಸ್ಮಾರಕ ತಾಂತ್ರಿಕ ಮಹಾವಿದ್ಯಾಲಯ ಮತ್ತು ನಿಟ್ಟೆ ಡೀಮ್ಡ್ ಟು ಬಿ ಯೂನಿವರ್ಸಿಟಿಗೆ ಭೇಟಿ ನೀಡಿದರು.

ತರಬೇತಿ ಮತ್ತು ಉದ್ಯೋಗದ ವಿಷಯದಲ್ಲಿ ಬಿ.ಟೆಕ್ ಮತ್ತು ಎಂ.ಟೆಕ್ ವಿದ್ಯಾರ್ಥಿಗಳಿಗೆ ಅನುಕೂಲವಾಗುವಂತೆ ಸಹಯೋಗದ ಬಗೆಗೆ ನಿಟ್ಟೆ ವಿದ್ಯಾಸಂಸ್ಥೆಯ ಆಡಳಿತ ಮುಖ್ಯಸ್ಥರೊಂದಿಗೆ ಸಭೆ ಅವರು ನಡೆಸಿದರು.

ಕಾರ್ಯಕ್ರಮದಲ್ಲಿ ನಿಟ್ಟೆಯ ಆಡಳಿತ ವಿಭಾಗದ ಪ್ರೊ-ಚಾನ್ಸಲರ್ ವಿಶಾಲ್ ಹೆಗ್ಡೆ, ನಿಟ್ಟೆ ವಿವಿ ಕುಲಪತಿ ಡಾ.ಎಂ.ಎಸ್. ಮೂಡಿತ್ತಾಯ, ನಿಟ್ಟೆ ತಾಂತ್ರಿಕ ಕಾಲೇಜಿನ ಪ್ರಾಂಶುಪಾಲ ನಿರಂಜನ್ ಎನ್.ಚಿಪ್ಲುಂಕರ್, ನಿಟ್ಟೆ ವಿವಿಯ ಅಂತರ್‌ ರಾಷ್ಟ್ರೀಯ ಸಹಯೋಗ ನಿರ್ದೇಶಕ ಪ್ರೊ.ಹರಿಕೃಷ್ಣ ಭಟ್, ಕೌನ್ಸೆಲಿಂಗ್, ವೆಲ್ಫೇರ್, ಟ್ರೈನಿಂಗ್ ಮತ್ತು ಪ್ಲೇಸ್ಮೆಂಟ್ ವಿಭಾಗದ ಮುಖ್ಯಸ್ಥ ಭರತ್ ಜಿ.ಕುಮಾರ್, ಮೆಕ್ಯಾನಿಕಲ್ ಇಂಜಿನಿಯರಿಂಗ್ ವಿಭಾಗದ ಮುಖ್ಯಸ್ಥ ಡಾ.ಶ್ರೀನಿವಾಸ್ ಪೈ, ನಿಟ್ಟೆ ಪರಿಗಣಿತ ವಿಶ್ವವಿದ್ಯಾಲಯದ ಅಂತರ್‌ರಾಷ್ಟ್ರೀಯ ಸಹಯೋಗ ವಿಭಾಗದ ಎಕ್ಸಿಕ್ಯೂಟಿವ್ ಅಸಿಸ್ಟೆಂಟ್ ಯಸುಕೊ ಸಾಟೊ ಹಾಗೂ ಅಂತರ್‌ರಾಷ್ಟ್ರೀಯ ಸಹಯೋಗ ವಿಭಾಗದ ಸಹಾಯಕ ನಿರ್ದೇಶಕ ಡಾ.ಸೈಯದ್ ಅಹ್ಮದ್ ಅತಿಥಿಗಳೊಂದಿಗೆ ಸಂವಾದ ನಡೆಸಿದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News