ಭಾರೀ ಮಳೆ: ದ.ಕ. ಜಿಲ್ಲೆಯ ಅಂಗನವಾಡಿಗಳಿಗೆ ರಜೆ
Update: 2025-05-26 08:44 IST
ಮಂಗಳೂರು: ದ.ಕ. ಜಿಲ್ಲಾದ್ಯಂತ ಇಂದು ಮುಂಜಾನೆಯಿಂದಲೇ ಭಾರೀ ಮಳೆಯಾಗಿದ್ದು, ಜಿಲ್ಲೆಯ ಎಲ್ಲಾ ಅಂಗನವಾಡಿಗಳಿಗೆ ರಜೆ ಘೋಷಿಸಲಾಗಿದೆ.
ಸೋಮವಾರ (ಇಂದು) ಮುಂದಿನ ಮೂರು ಗಂಟೆಗಳಲ್ಲಿ ಜಿಲ್ಲೆಯ ಒಂದೆರೆಡು ಕಡೆಗಳಲ್ಲಿ ಗಾಳಿ, ಮಿಂಚು, ಗುಡುಗಿನೊಂದಿಗೆ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.