ಭಾರೀ ಮಳೆ: ಇಂದು (ಜು.26) ಬೆಳ್ತಂಗಡಿ ತಾಲೂಕಿನ ಎಲ್ಲಾ ವಿದ್ಯಾ ಸಂಸ್ಥೆಗಳಿಗೆ ರಜೆ
Update: 2025-07-26 08:10 IST
ಬೆಳ್ತಂಗಡಿ: ತಾಲೂಕಿನಲ್ಲಿ ಸೇರಿದಂತೆ ಜಿಲ್ಲೆಯಾದ್ಯಂತ ಭಾರೀ ಮಳೆಯಾಗುತ್ತಿದೆ. ಹವಾಮಾನ ಇಲಾಖೆಯ ಮಾಹಿತಿಯಂತೆ ಮುಂದಿನ 24 ಗಂಟೆಗಳಲ್ಲಿ ಭಾರೀ ಮಳೆಯಾಗುವ ಸಂಭವ ಇರುವ ಕಾರಣ ಮುನ್ನೆಚ್ಚರಿಕಾ ಕ್ರಮವಾಗಿ ತಾಲೂಕಿನ ಎಲ್ಲಾ ಅಂಗನವಾಡಿ ಮತ್ತು ಪ್ರಾಥಮಿಕ, ಪ್ರೌಢಶಾಲೆಗಳಿಗೆ ಇಂದು (26) ರಜೆ ಘೋಷಿಸಿ, ಬೆಳ್ತಂಗಡಿ ತಹಶೀಲ್ದಾರ್ ಪೃಥ್ವಿ ಸಾನಿಕಂ ಆದೇಶ ಹೊರಡಿಸಿದ್ದಾರೆ.