ದೇರಳಕಟ್ಟೆ ಕ್ಲಸ್ಟರ್ ಗಳ ಹೋಬಳಿ ಮಟ್ಟದ ಪ್ರತಿಭಾ ಕಾರಂಜಿ-2023
ಉಳ್ಳಾಲ, ಆ.28: ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್, ಶಾಲಾ ಶಿಕ್ಷಣ ಇಲಾಖೆ, ಸಮಗ್ರ ಶಿಕ್ಷಣ ಕರ್ನಾಟಕ, ಕ್ಷೇತ್ರ ಶಿಕ್ಷಣಾಧಿಕಾರಿ ಕಚೇರಿ ಮಂಗಳೂರು ದಕ್ಷಿಣ ವಲಯ ಇವುಗಳ ಸಹಭಾಗಿತ್ವದಲ್ಲಿ ದೇರಳಕಟ್ಟೆ ನೇತಾಜಿ ಸುಭಾಷ್ ಚಂದ್ರ ಬೋಸ್ ಪ್ರೌಢ ಶಾಲೆ ವಠಾರದಲ್ಲಿ ಮುನ್ನೂರು, ಕೊಣಾಜೆ ಪದವು ಮತ್ತು ದೇರಳಕಟ್ಟೆ ಕ್ಲಸ್ಟರ್ ಗಳ ಹೋಬಳಿ ಮಟ್ಟದ ಪ್ರತಿಭಾ ಕಾರಂಜಿ-2023 ಸೋಮವಾರ ನಡೆಯಿತು.
ಕಾರ್ಯಕ್ರಮ ಉದ್ಘಾಟಿಸಿದ ಸ್ಪೀಕರ್ ಯು.ಟಿ. ಖಾದರ್ ಮಾತನಾಡಿ, ವಿದ್ಯಾರ್ಥಿಗಳಿಗೆ ಪ್ರತಿಭೆಯನ್ನು ಪ್ರದರ್ಶಿಸಲು ಇದೊಂದು ಉತ್ತಮ ಅವಕಾಶ. ಇದಕ್ಕೆ ಎಲ್ಲರೂ ಸಹಕಾರ ನೀಡಿದರೆ ಮಕ್ಕಳಿಗೆ ಶೈಕ್ಷಣಿಕ ವಾಗಿ ಬೆಳೆಯಲು ಸಾಧ್ಯ ಆಗುತ್ತದೆ ಎಂದು ಹೇಳಿದರು.
ನೇತಾಜಿ ಸುಭಾಷ್ ಚಂದ್ರ ಬೋಸ್ ಪ್ರೌಢಶಾಲೆ ಅಧ್ಯಕ್ಷ ಪಿ.ಎಚ್.ಇಸ್ಮಾಯೀಲ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.
ಕಾರ್ಯಕ್ರಮದಲ್ಲಿ ಬೆಳ್ಮ ಗ್ರಾಮ ಪಂಚಾಯತ್ ಅಧ್ಯಕ್ಷ ಎಂ.ರಝಿಯಾ, ಉಪಾಧ್ಯಕ್ಷ ಹೇಮಾವತಿ, ಮಾಜಿ ಅಧ್ಯಕ್ಷ ಅಬ್ದುಲ್ ಸತ್ತಾರ್, ಯೂಸುಫ್ ಬಾವ, ಮಾಜಿ ಉಪಾಧ್ಯಕ್ಷೆ ರಮ್ಲತ್, ಸದಸ್ಯ ಇಕ್ಬಾಲ್ ಎಚ್.ಆರ್., ನಮ್ಮ ಸುರಕ್ಷಾ ಸಮಿತಿಯ ಅಧ್ಯಕ್ಷ ನಾರಾಯಣ ಶೆಟ್ಟಿ, ಹಿರಿಯ ಪ್ರಾಥಮಿಕ ಶಾಲೆಯ ಎಸ್ ಡಿಎಂಸಿ ಅಧ್ಯಕ್ಷ ಹನೀಫ್ ಬೆಳ್ಮ, ಉಪಾಧ್ಯಕ್ಷ ರಾಯಿಲ, ಹಳೇ ವಿದ್ಯಾರ್ಥಿ ಸಂಘದ ಅಧ್ಯಕ್ಷ ಜಗದೀಶ ರೈ, ಉಪಾಧ್ಯಕ್ಷ ಅಬ್ದುಲ್ ಖಾದರ್, ಕಾರ್ಯದರ್ಶಿ ಸುರೇಶ್, ಪ್ರೌಢಶಾಲೆ ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ಶಿಹಾಬುದ್ದೀನ್, ಮುಖ್ಯ ಶಿಕ್ಷಕರ ಸಂಘದ ಅಧ್ಯಕ್ಷ ಜಯವಂತಿ ಸೋನ್ಸ್, ಕಾರ್ಯದರ್ಶಿ ಅನಿತಾ, ಜಿಲ್ಲಾ ಚಿತ್ರಕಲಾ ಶಿಕ್ಷಕರ ಕಾರ್ಯದರ್ಶಿ ಬಿ.ಎಂ.ರಫೀಕ್ ತುಂಬೆ, ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಅಧ್ಯಕ್ಷ ತ್ಯಾಗಿ ಹರೇಕಳ, ಸೋಮೇಶ್ವರ ಶಾಲೆಯ ಮುಖ್ಯ ಶಿಕ್ಷಕಿ ಚಂಚಲಾಕ್ಷ್ಮಿ ಜ್ಯೋತಿ, ಉದ್ಯಮಿ ಫಾರೂಕ್ ಮತ್ತಿತರರು ಉಪಸ್ಥಿತರಿದ್ದರು.
ಶಾಲಾ ಮುಖ್ಯೋಪಾಧ್ಯಾಯಿನಿ ನಯನಾ ಕುಮಾರಿ ಸ್ವಾಗತಿಸಿದರು. ವಿದ್ಯಾಶ್ರೀ, ವೀಣಾ ಕಾರ್ಯಕ್ರಮ ನಿರೂಪಿಸಿದರು. ಪ್ರಮೀಳಾ ಮೊಂತೆರೊ ವಂದಿಸಿದರು.