×
Ad

ಉಳ್ಳಾಲ ದರ್ಗಾ ಸಮಿತಿಯಿಂದ ನಾಳೆ ಸನ್ಮಾನ ಕಾರ್ಯಕ್ರಮ

Update: 2023-09-04 14:01 IST

ಉಳ್ಳಾಲ: ಕೇಂದ್ರ ಜುಮಾ ಮಸೀದಿ ಮತ್ತು ಸಯ್ಯಿದ್ ಮದನಿ ದರ್ಗಾ ಸಮಿತಿ ವತಿಯಿಂದ

ರಾಜ್ಯ ಸರ್ಕಾರದ ಸಚಿವರುಗಳಿಗೆ ಸನ್ಮಾನ ಕಾರ್ಯಕ್ರಮವು ಸೆಪ್ಟೆಂಬರ್ 05 ಮಂಗಳವಾರ ಸಂಜೆ 6.30ಕ್ಕೆ ದರ್ಗಾ ವಠಾರದಲ್ಲಿರುವ ಮದನಿ ಹಾಲಿನಲ್ಲಿ ನಡೆಯಲಿದೆ.

ಉಳ್ಳಾಲ ಖಾಝಿ ಅಸ್ಸಯ್ಯಿದ್ ಫಝಲ್ ಕೋಯಮ್ಮ ತಂಙಳ್ ದುಆ ನೆರವೇರಿಸಲಿದ್ದಾರೆ.

ಕರ್ನಾಟಕ ಸರ್ಕಾರದ ವಿದಾನಸಭಾಧ್ಯಕ್ಷ ಯು.ಟಿ ಖಾದರ್, ವಸತಿ, ವಕ್ಫ್ ಮತ್ತು ಅಲ್ಪಸಂಖ್ಯಾತ ಕಲ್ಯಾಣ ಸಚಿವ ಬಿ.ಝಡ್ ಝಮೀರ್ ಅಹ್ಮದ್ ಖಾನ್, ಪೌರಾಡಳಿತ ಮತ್ತು ಹಜ್ಜ್ ಸಚಿವ ರಹೀಮ್ ಖಾನ್ ರವರಿಗೆ ಸನ್ಮಾನ ಕಾರ್ಯಕ್ರಮ ನಡೆಯಲಿದೆ. ಈ ಕಾರ್ಯಕ್ರಮಕ್ಕೆ ಹಲವಾರು ಗಣ್ಯರು, ಉಳ್ಳಾಲ ಸಾವಿರ ಜಮಾಅತ್ ಸದಸ್ಯರು ಭಾಗವಹಿಸಲಿದ್ದಾರೆ ಎಂದು ಉಳ್ಳಾಲ ದರ್ಗಾ ಅಧ್ಯಕ್ಷರಾದ ಬಿ.ಜಿ ಹನೀಫ್ ಹಾಜಿ ಪತ್ರಿಕಾ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News