×
Ad

ಆಸ್ಪತ್ರೆಯಲ್ಲಿ ಬಾಲಕಿಯ ಅತ್ಯಾಚಾರ ಆರೋಪ: ಸೂಕ್ತ ರಕ್ಷಣೆ ನೀಡಲು ಮನವಿ

Update: 2023-08-22 19:04 IST

ಮಂಗಳೂರು, ಆ.22: ನಗರದ ಖಾಸಗಿ ಆಸ್ಪತ್ರೆಯಲ್ಲಿ ಭಿನ್ನ ಸಾಮರ್ಥ್ಯದ ಬಾಲಕಿಯನ್ನು ಅತ್ಯಾಚಾರ ಎಸಗಿದ ಪ್ರಕರಣ ವನ್ನು ಪೊಲೀಸ್ ಇಲಾಖೆಯು ಗಂಭೀರವಾಗಿ ಪರಿಗಣಿಸಿ ತಕ್ಷಣ ಕ್ರಮ ಜರಗಿಸಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಸೂಕ್ತ ರಕ್ಷಣೆ ಕಲ್ಪಿಸುವಂತೆ ರಾಜ್ಯ ವಿಕಲಚೇತರನ ಸೇವಾ ಸಂಸ್ಥೆಗಳ ಒಕ್ಕೂಟದ ದ.ಕ.ಜಿಲ್ಲಾ ಘಟಕವು ದ.ಕ.ಜಿಲ್ಲಾಡಳಿತಕ್ಕೆ ಜಿಲ್ಲಾ ಅಂಗವಿಕಲರ ಮತ್ತು ಸಬಲೀಕರಣ ಇಲಾಖೆಯ ಮೂಲಜ ಮನವಿ ಸಲ್ಲಿಸಿದೆ.

ಈ ಪ್ರಕರಣದಲ್ಲಿ ಬಾಲಕಿಯ ಸಂಬಂಧಿಕರೇ ಸಹಕರಿಸಿರುವುದನ್ನು ಪೊಲೀಸ್ ಇಲಾಖೆಯು ಗಂಭೀರವಾಗಿ ಪರಿಗಣಿಸಿದೆ. ಆಸ್ಪತ್ರೆಯಲ್ಲಿ ಈ ಘಟನೆ ನಡೆದಿರುವ ಕಾರಣ ಅಲ್ಲಿನ ಸಿಬ್ಬಂದಿ ವರ್ಗವು ಏನು ಮಾಡಿತ್ತು ಎಂಬುದು ಪ್ರಶ್ನಾರ್ಹ. ಮುಂದಿನ ದಿನಗಳಲ್ಲಿ ಇಂತಹ ಪರಿಸ್ಥಿತಿ ಯಾರಿಗೂ ಬರಬಾರದು. ಹಾಗಾಗಿ ಸೂಕ್ತ ಕ್ರಮ ಜರಗಿಸಬೇಕು ಮತ್ತು ವಿಕಲಚೇತನರಿಗೆ ರಕ್ಷಣೆ ನೀಡಬೇಕು ಎಂದು ಸಂಘದ ಪ್ರಮುಖರಾದ ಡಾ. ವಸಂತ ಕುಮಾರ್ ಶೆಟ್ಟಿ ಆಗ್ರಹಿಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News