ಉಳ್ಳಾಲ ದರ್ಗಾಕ್ಕೆ ವಸತಿ ಸಚಿವ ಝಮೀರ್ ಅಹ್ಮದ್ ಭೇಟಿ
ಉಳ್ಳಾಲ: ರಾಜ್ಯ ವಕ್ಫ್ ಮತ್ತು ವಸತಿ ಸಚಿವ ಝಮೀರ್ ಅಹ್ಮದ್ ಅವರು ಗುರುವಾರ ಉಳ್ಳಾಲ ದರ್ಗಾಕ್ಕೆ ಭೇಟಿ ನೀಡಿ ಶರೀಯತ್ ಕಾಲೇಜು ಕಟ್ಟಡ ಪರಿಶೀಲನೆ ನಡೆಸಿದರು.
ಈ ಸಂದರ್ಭದಲ್ಲಿ ದರ್ಗಾ ಅಧ್ಯಕ್ಷ ಹನೀಫ್ ಹಾಜಿ ಅವರು ಹೂಗುಚ್ಛ ನೀಡಿ ಸ್ವಾಗತಿಸಿ ಅವರನ್ನು ಬರ ಮಾಡಿಕೊಂಡರು ಹಾಗೂ ದರ್ಗಾ ಆವರಣ ಗೋಡೆಗೆ ಅನುದಾನ ನೀಡುವಂತೆ ಮನವಿ ಮಾಡಿದರು.
ಕಟ್ಟಡ ಪರಿಶೀಲನೆ ನಡೆಸಿದ ಬಳಿಕ ಮಾತನಾಡಿದ ಝಮೀರ್ ಅಹ್ಮದ್ ಅವರು ಶರೀಯತ್ ಕಾಲೇಜು ವಸತಿ ಕಟ್ಟಡ ನಿರ್ಮಾಣಕ್ಕೆ ಈಗಾಗಲೇ ಮೂರು ಕೋಟಿ ಮಂಜೂರು ಮಾಡಲಾಗಿದೆ. ಕಾಂಪೌಂಡ್ ನಿರ್ಮಾಣಕ್ಕಾಗಿ ಇನ್ನೊಂದು ಕೋಟಿ ಮಂಜೂರು ಮಾಡಿದರು. ದರ್ಗಾ ಝಿಯಾರತ್ ನಡೆಸಿದ ಬಳಿಕ ಅಧ್ಯಕ್ಷರ ಕಚೇರಿಯಲ್ಲಿ ಸಭೆ ನಡೆಸಿದ ಅವರು, ಅಹವಾಲು ಸ್ವೀಕಾರ ಮಾಡಿದರು.
ಈ ಸಂದರ್ಭದಲ್ಲಿ ಯುಟಿ ಇಫ್ತಿಕರ್, ಕೆ.ಪಿ.ಸಿ.ಸಿ ಪ್ರಧಾನ ಕಾರ್ಯದರ್ಶಿ ಇನಾಯತ್ ಅಲಿ, ವಕ್ಫ್ ಜಿಲ್ಲಾ ಸಲಹಾ ಸಮಿತಿ ಅಧ್ಯಕ್ಷ ನಾಸೀರ್ ಲಕ್ಕಿ ಸ್ಟಾರ್, ವಕ್ಫ್ ಅಧಿಕಾರಿ ಅಬೂಬಕ್ಕರ್, ನಿವೃತ್ತ ಪೊಲೀಸ್ ಅಧಿಕಾರಿ ಜಿ ಎ.ಬಾವಾ, ದರ್ಗಾ ಉಪಾಧ್ಯಕ್ಷ ಅಶ್ರಫ್ ರೈಟ್ ವೇ, ಪ್ರಧಾನ ಕಾರ್ಯದರ್ಶಿ ಶಿಹಾಬುದ್ದೀನ್ ಸಖಾಫಿ, ಕಾರ್ಯದರ್ಶಿ ಮುಸ್ತಫಾ ಮದನಿ ನಗರ, ಕೋಶಾಧಿಕಾರಿ ನಾಝೀಮ್ ಮುಕಚೇರಿ, ಝೈನಾಕ ಮೇಲಂಗಡಿ, ಅಬ್ಬಾಸ್ ಕೋಟೆಪುರ, ರಫೀಕ್ ಕೋಡಿ, ಚೆರ್ಮೋನು,ಅಲ್ತಾಫ್ ಹಳೆಕೋಟೆ, ಅಶ್ರಫ್ ಕೋಡಿ ಮತ್ತು ಸಮಿತಿ ಸದಸ್ಯರು ಉಪಸ್ಥಿತರಿದ್ದರು.