×
Ad

ಮೂಡುಬಿದಿರೆಯಲ್ಲಿ ಅನೈತಿಕ ಪೊಲೀಸ್‌ಗಿರಿ: ವಿದ್ಯಾರ್ಥಿಗೆ ತಂಡದಿಂದ ಹಲ್ಲೆ

Update: 2023-08-22 21:47 IST

ಮೂಡುಬಿದಿರೆ: ಸಹಪಾಠಿ ವಿದ್ಯಾರ್ಥಿನಿ ಜತೆ ಮಾತನಾಡಿದ ವಿದ್ಯಾರ್ಥಿಗೆ ತಂಡವೊಂದು ಹಲ್ಲೆ ನಡೆಸಿದ ಘಟನೆ ಇಲ್ಲಿನ ರಾಜೀವ್ ಗಾಂಧಿ ಕಾಂಪ್ಲೆಕ್ಸ್ ಬಳಿಯ ಬಸ್ ನಿಲ್ದಾಣದಲ್ಲಿ ನಡೆದಿದೆ.

ಹಲ್ಲೆಗೊಳಗಾದ ವಿದ್ಯಾರ್ಥಿ ನೀಡಿದ ದೂರಿನ ಮೇರೆಗೆ ಮೂಡುಬಿದಿರೆ ಪೊಲೀಸರು ಮೂವರ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಇಲ್ಲಿನ ಕಾಲೇಜು ವಿದ್ಯಾರ್ಥಿನಿಯೋರ್ವಳು ಸೋಮವಾರ ರಾತ್ರಿ ಬೆಂಗಳೂರಿಗೆ ಹೋಗಲು ಬಸ್ ಕಾಯುತ್ತಿದ್ದಳು. ಆಕೆಯ ಸಹಪಾಠಿ ಕೋಟೆಬಾಗಿಲಿನ ಮುಸ್ಲಿಮ್‌ ವಿದ್ಯಾರ್ಥಿ ಬಸ್ ಬರುವ ತನಕ ವಿದ್ಯಾರ್ಥಿನಿ ಜತೆ ಇದ್ದು ಮಾತನಾಡುತ್ತಿದ್ದ ಎನ್ನಲಾಗಿದೆ. ಇದನ್ನು ಸ್ಥಳೀಯ ಕೆಲವರು ಗಮನಿಸುತ್ತಿದ್ದರೆನ್ನಲಾಗಿದೆ. ವಿದ್ಯಾರ್ಥಿನಿ ಬಸ್ ಹತ್ತಿ ಬೆಂಗಳೂರಿಗೆ ಹೊರಟ ನಂತರ ಯುವಕರ ತಂಡವೊಂದು ವಿದ್ಯಾರ್ಥಿಗೆ ಹಲ್ಲೆ ನಡೆಸಿದೆ ಎಂದು ದೂರಲಾಗಿದೆ.

ಈ ಬಗ್ಗೆ ಮೂಡುಬಿದಿರೆ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News