×
Ad

ಸೆ.13: ಬಜಾಲ್ ನಂತೂರು ನವೀಕೃತ ಮಸೀದಿ ಉದ್ಘಾಟನೆ

Update: 2024-09-09 19:41 IST

ಮಂಗಳೂರು, ಸೆ.9: ಬಜಾಲ್ ನಂತೂರಿನಲ್ಲಿ 1973ರಲ್ಲಿ ಸ್ಥಾಪನೆಗೊಂಡ ಬದ್ರಿಯಾ ಜುಮಾ ಮಸೀದಿಯ ನವೀಕೃತ ಕಟ್ಟಡದ ಉದ್ಘಾಟನಾ ಕಾರ್ಯಕ್ರಮವು ಸೆ.13 ರಂದು ಮಧ್ಯಾಹ್ನ 12ಕ್ಕೆ ನಡೆಯಲಿದೆ.

ಕುಂಬೋಳ್ ಅಸ್ಸಯ್ಯದ್ ಕೆ.ಎಸ್.ಆಟಕೋಯ ತಂಳ್ ಮಸೀದಿ ಉದ್ಘಾಟಿಸಿ ಜುಮಾಕ್ಕೆ ನೇತೃತ್ವ ನೀಡಲಿದ್ದಾರೆ. ಮುಖ್ಯ ಅತಿಥಿಗಳಾಗಿ ವಿಧಾನಸಭಾ ಸಭಾಧ್ಯಕ್ಷ ಯು.ಟಿ.ಖಾದರ್, ಯನೆಪೊಯ ವಿಶ್ವವಿದ್ಯಾನಿಲಯದ ಕುಲಾಧಿಪತಿ ಡಾ.ಯೆನೆಪೊಯ ಅಬ್ದುಲ್ಲಾ ಕುಂಞಿ, ಕಾರ್ಪೊರೇಟರ್ ಅಶ್ರಫ್ ಬಜಾಲ್, ಮಸೀದಿಯ ಖತೀಬ್ ಅಲ್ಹಾಜ್ ಪಿಎ ಅಬ್ದುಲ್ ನಾಸಿರ್ ಸಅದಿ ಭಾಗವಹಿಸಲಿದ್ದಾರೆ ಎಂದು ಮಸೀದಿಯ ಅಧ್ಯಕ್ಷ ಹಾಗೂ ಕಾರ್ಪೊರೇಟರ್ ಅಬ್ದುರ‌್ರವೂಫ್ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News