×
Ad

ದ.ಕ. ಜಿಲ್ಲೆಯಲ್ಲಿ ಮರಳು ಸಮಸ್ಯೆ ಬಗೆಹರಿಸಲು ಗೃಹ ಸಚಿವರಲ್ಲಿ ಇನಾಯತ್ ಅಲಿ, ಮಿಥುನ್ ರೈ ಮನವಿ

Update: 2023-11-06 20:07 IST

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳೆದ ಹಲವು ತಿಂಗಳಿಂದ ಮರಳು ಸಮಸ್ಯೆ ಉಂಟಾಗುತ್ತಿದ್ದು, ಲಭ್ಯವಿರುವ ಮರಳಿಗೆ ದುಬಾರಿ ಬೆಲೆ ನೀಡಬೇಕಾಗಿದೆ. ಇದರಿಂದ ಜಿಲ್ಲೆಯಲ್ಲಿ ಬಡ ಹಾಗೂ ಮಧ್ಯಮ ವರ್ಗದ ಜನರಿಗೆ ಮರಳು ಖರೀದಿ ಅಸಾಧ್ಯವಾಗಿದೆ. ಈ ಕಾರಣದಿಂದ ಜಿಲ್ಲೆಯಲ್ಲಿ ಕಟ್ಟಡ ನಿರ್ಮಾಣ ಕಾಮಗಾರಿಗಳು ಹಲವೆಡೆ ಸ್ಥಗಿತಗೊಂಡಿದೆ.

ಗೃಹ ಸಚಿವರಾದ ಡಾ. ಜಿ.‌ ಪರಮೇಶ್ವರ್ ರವರು ಮಂಗಳೂರಿಗೆ ಆಗಮಿಸಿದ ಸಂದರ್ಭ ಈ ವಿಚಾರವಾಗಿ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಇನಾಯತ್ ಅಲಿ ಹಾಗೂ ಮಿಥುನ್ ರೈ ಗೃಹ ಸಚಿವರೊಂದಿಗೆ ಚರ್ಚೆ ನಡೆಸಿದರು. ಮರಳುಗಾರಿಕೆಗೆ ಅನುಮತಿಯ ವಿಚಾರದ ಬಗ್ಗೆ ಗೃಹ ಸಚಿವರ ಗಮನಕ್ಕೆ ತಂದರು.

ಈ ಬಗ್ಗೆ ತಕ್ಷಣವೇ ಸ್ಪಂದಿಸಿದ ಗೃಹ ಸಚಿವರು ಸ್ಥಳದಲ್ಲಿದ್ದ ಜಿಲ್ಲಾಧಿಕಾರಿ ಹಾಗೂ ಪೊಲೀಸ್ ಆಯುಕ್ತರಿಗೆ ಸೂಕ್ತ ಕ್ರಮಕೈಗೊಂಡು ಸಮಸ್ಯೆ ಬಗೆಹರಿಸುವಂತೆ ಸೂಚಿಸಿದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News