×
Ad

ಸುರತ್ಕಲ್ ಮಾರುಕಟ್ಟೆ ಕಾಮಗಾರಿ‌ ಪುನಾರಂಭಿಸಲು ನಗರಾಭಿವೃದ್ಧಿ ಸಚಿವರಿಗೆ ಇನಾಯತ್ ಅಲಿ ಮನವಿ

Update: 2023-11-24 20:47 IST

ಸುರತ್ಕಲ್ : 7ವರ್ಷಗಳಿಂದ ನನೆಗುದಿಗೆ ಬಿದ್ದಿರುವ ಸುರತ್ಕಲ್ ಮಾರುಕಟ್ಟೆ ಸಂಕೀರ್ಣದ ಕಾಮಗಾರಿಯನ್ನು ಶೀಘ್ರವೇ ಪುನರಾಂಭಿಸುವಂತೆ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಇನಾಯತ್ ಅಲಿ ಅವರು ನಗರಾಭಿವೃದ್ಧಿ ಸಚಿವರಾದ ಬಿ.ಎಸ್. ಸುರೇಶ್ ಅವರಿಗೆ ಮನವಿ ಸಲ್ಲಿಸಿ ಒತ್ತಾಯಿಸಿದರು.

ಬಿ.ಎಸ್. ಸುರೇಶ್ ಅವರು ಶುಕ್ರವಾರ ಮಂಗಳೂರಿನ ಎಮ್ಮೆಕೆಯಲ್ಲಿ ನಿರ್ಮಿಸಲಾಗಿರುವ ನೂತನ ಅಂತಾರಾಷ್ಟ್ರೀಯ ಈಜು ಕೊಳದ ಉದ್ಘಾಟನೆಗೆ ಆಗಮಿಸಿದ್ದ ವೇಳೆ ಈ ಮನವಿ ಸಲ್ಲಿಸಿ ಆಗ್ರಹಿಸಿದರು.

ಸುರತ್ಕಲ್ ಮಾರುಕಟ್ಟೆ ಸಂಕೀರ್ಣ ಕಾಮಗಾರಿಗೆ 2013ರ ಸಿದ್ದರಾಮಯ್ಯ ನೇತೃತ್ವದ ಕರ್ನಾಟಕ ರಾಜ್ಯ ಸರ್ಕಾರದ ಅವಧಿಯಲ್ಲಿ ಅನುದಾನ ಮಂಜೂರುಗೊಳಿಸಿ ಕಾಮಗಾರಿಯನ್ನು ಪ್ರಾರಂಭಿಸಲಾಗಿತ್ತು. ನಂತರ ಕಾಮಗಾರಿಯು ಕುಂಟುತ್ತಾ ಸಾಗಿ ಅರ್ಧದಲ್ಲಿ ನಿಂತಿದೆ. ಕಾಮಗಾರಿ ವಿಳಂಬ ನೀತಿಯಿಂದಾಗಿ ಸುರತ್ಕಲ್ ಪ್ರದೇಶದ ಜನತೆಗೆ ಸರಿಯಾದ ಮಾರುಕಟ್ಟೆ ಯಿಲ್ಲದೆ ಸ್ಥಳೀಯರು ಹಾಗೂ ಮಧ್ಯಮ ಮತ್ತು ಬಡ ವರ್ಗದ ವ್ಯಾಪಾರಸ್ಥರು ತೊಂದರೆಗೊಳಗಾಗಿದ್ದಾರೆ ಎಂದು ಇನಾಯತ್ ಅಲಿ ಅವರು ಸಚಿವರಿಗೆ ಸಲ್ಲಿಸಿದ‌ ಮನವಿಯಲ್ಲಿ ತಿಳಿಸಿದ್ದಾರೆ.

ಈ ಸಂದರ್ಭ ಕಾರ್ಪೋರೇಟರ್‌ಗಳಾದ ಶಶಿಧರ್ ಹೆಗ್ಡೆ, ನವೀನ್ ಡಿಸೋಜಾ, ಅನಿಲ್ ಕುಮಾರ್, ಮುಖಂಡರಾದ ಭಾಸ್ಕರ್ ಮೊಯ್ಲಿ, ಪ್ರತಿಭಾ ಕುಳಾಯಿ, ಗಿರೀಶ್ ಆಳ್ವ ಹಾಗೂ ಇನ್ನಿತರರು ಉಪಸ್ಥಿತರಿದ್ದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News