×
Ad

ಪ್ರೆಸ್ಟೀಜ್ ಇಂಟರ್ ನ್ಯಾಶನಲ್ ಸ್ಕೂಲ್ ಮತ್ತು ಪಿಯು ಕಾಲೇಜಿನಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ

Update: 2024-08-16 12:55 IST

ಮಂಗಳೂರು, ಆ.16: ಜೆಪ್ಪಿನಮೊಗೆರುವಿನ ಪ್ರೆಸ್ಟೀಜ್ ಇಂಟರ್ ನ್ಯಾಶನಲ್ ಸ್ಕೂಲ್ ಮತ್ತು ಪಿಯು ಕಾಲೇಜಿನಲ್ಲಿ 78ನೇ ಸ್ವಾತಂತ್ರ್ಯೋತ್ಸವವನ್ನು ಅತ್ಯಂತ ಸಂಭ್ರಮದಿಂದ ಆಚರಿಸಲಾಯಿತು.

ಮುಖ್ಯ ಅತಿಥಿ ಸಾರ್ಜೆಂಟ್ ಪ್ರಭಾಕರ ಗುಂಡೇರ ಧ್ವಜಾರೋಹಣ ನೆರವೇರಿಸಿ ಸಂದೇಶ ನೀಡಿದರು.

ಗೌರವ ಅತಿಥಿಗಳಾಗಿ ಡಾ.ಆನಂದ ಬಂಗೇರ, ಸೈಫ್ ಸುಲ್ತಾನ್ ಸೈಯದ್, ಡಾ.ಹಸೀಬ್ ಅಮಾನ್, ಡಾ.ರುಕ್ಸಾನಾ ಹಾಸನ್ ಭಾಗವಹಿಸಿ ಮಾತನಾಡಿದರು.

ಇದೇವೇಳೆ ಕರ್ನಾಟಕ ರಾಜ್ಯ ಅಲೈಡ್ ಮತ್ತು ಹೆಲ್ತ್ ಕೇರ್ ಕೌನ್ಸಿಲ್ ಅಧ್ಯಕ್ಷರಾಗಿ ಆಯ್ಕೆಯಾದ ಡಾ.ಯು.ಟಿ.ಇಫ್ತಿಕಾರ್ ಅಲಿ ಅವರನ್ನು ಸನ್ಮಾನಿಸಲಾಯಿತು.

 ಇದೇವೇಳೆ ಆಯೋಜಿಸಿದ್ದ ರಕ್ತದಾನ ಶಿಬಿರದಲ್ಲಿ ವಿದ್ಯಾರ್ಥಿಗಳ ಪಾಲಕರು, ಸಂಸ್ಥೆಯ ಸಿಬ್ಬಂದಿ ಮತ್ತು ಆಡಳಿತ ಮಂಡಳಿ ರಕ್ತದಾನ ಮಾಡಿದರು.

ಕಾರ್ಯಕ್ರಮವು ಶಾಲಾ ಕ್ಯಾಬಿನೆಟ್ ಸದಸ್ಯರ ಹೂಡಿಕೆ ಸಮಾರಂಭವನ್ನು ಸಹ ಒಳಗೊಂಡಿತ್ತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಅಧ್ಯಕ್ಷ ಹೈದರ್ ಅಲಿ ವಹಿಸಿದ್ದರು.

ವ್ಯವಸ್ಥಾಪಕ ನಿರ್ದೇಶಕಿ ರೇಷ್ಮಾ ಹೈದರ್, ಪ್ರಾಂಶುಪಾಲೆ ಫಿರೋಝಾ ಫಯಾಝ್ ಮತ್ತು ಸಿಂಧೂ ಸೇತು ಮತ್ತು ಟ್ರಸ್ಟಿಗಳು ಉಪಸ್ಥಿತರಿದ್ದರು.

ವಿದ್ಯಾರ್ಥಿಗಳು, ಶಿಕ್ಷಕರು ಮತ್ತು ಸಿಬ್ಬಂದಿ ಪಾಲ್ಗೊಂಡಿದ್ದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News