ಕಣ್ಣೂರು ಆಂಗ್ಲ ಮಾಧ್ಯಮ ಶಾಲೆ ಮತ್ತು ಮಹಿಳಾ ಪಿಯು ಕಾಲೇಜಿನಲ್ಲಿ ಸ್ವಾತಂತ್ರ್ಯ ದಿನಾಚರಣೆ
Update: 2025-08-15 22:13 IST
ಕಣ್ಣೂರು ಆಂಗ್ಲ ಮಾಧ್ಯಮ ಶಾಲೆ ಮತ್ತು ಮಹಿಳಾ ಪಿಯು ಕಾಲೇಜಿನಲ್ಲಿ ಶಾಲೆಯ ಟ್ರಸ್ಟಿಗಳಾದ ಬಿ.ಮುಹಮ್ಮದ್‌ರ ಅಧ್ಯಕ್ಷತೆಯಲ್ಲಿ ಸ್ವಾತಂತ್ರ್ಯೋತ್ಸವ ಆಚರಿಸಲಾಯಿತು.
ಕಂಕನಾಡಿ ನಗರ ಪೊಲೀಸ್ ಠಾಣೆಯ ಎಸ್ಸೈ ಶಿವಕುಮಾರ್ ಧ್ವಜಾರೋಹಣಗೈದರು.
ಸ್ವಾತಂತ್ರ್ಯೋತ್ಸವದ ಪ್ರಯುಕ್ತ ಏರ್ಪಡಿಸಲಾಗಿದ್ದ ಸಾಂಸ್ಕೃತಿಕ ಕಾರ್ಯಕ್ರಮದ ವಿಜೇತರಿಗೆ ಬಹುಮಾನ ವಿತರಿಸಲಾಯಿತು.
ಸಂಸ್ಥೆಯ ಕಾರ್ಯದರ್ಶಿ ಸಿತಾರ್ ಅಬ್ದುಲ್ ಮಜೀದ್ ಹಾಜಿ ಪ್ರಾಸ್ತಾವಿಕ ಭಾಷಣಗೈದರು. ಕಾಲೇಜಿನ ಪ್ರಾಂಶುಪಾಲೆ ವಿಶಾಲಾಕ್ಷಿ, ಉದ್ಯಮಿ ರಫೀಕ್ ಉಪಸ್ಥಿತರಿದ್ದರು. ಮುಖ್ಯ ಶಿಕ್ಷಕಿ ಶಂಷಾದ್ ಸ್ವಾಗತಿಸಿದರು. ಶಾಲಾ ಸಂಚಾಲಕ ರಿಯಾಝ್ ಅಹ್ಮದ್ ಕೆ.ಬಿ. ವಂದಿಸಿದರು.