ಜ. 24: ಬಿಎಸ್‌ಡಬ್ಲ್ಯುಟಿ ವರ್ಷದ ವ್ಯಕ್ತಿ ಪ್ರಶಸ್ತಿ ಪ್ರದಾನ
Update: 2026-01-16 20:16 IST
ಮಂಗಳೂರು, ಜ.16: ಭಾರತ್ ಸೋಷಿಯಲ್ ಆಂಡ್ ವೆಲ್ಫೇರ್ ಟ್ರಸ್ಟ್ ಮಂಗಳೂರು (ಬಿಎಸ್‌ಡಬ್ಲ್ಯುಟಿ) ಇದರ ದಶಮಾನೋತ್ಸವ ಕಾರ್ಯಕ್ರಮವು ಜ.24ರಂದು ಅಪರಾಹ್ನ 3ಕ್ಕೆ ನಗರದ ರವೀಂದ್ರ ಕಲಾಭವನದಲ್ಲಿ ನಡೆಯಲಿದೆ.
ಈ ಸಂದರ್ಭ ವಿದ್ಯಾರ್ಥಿ ವೇತನ ವಿತರಣೆ ಮತ್ತು ಸಮಾಜ ಸೇವಕ ದಿನೇಶ್ ಪೈ ಕುಂದಾಪುರ ಅವರಿಗೆ ವರ್ಷದ ವ್ಯಕ್ತಿ 2025 ಪ್ರಶಸ್ತಿಯನ್ನು ಪ್ರದಾನ ಮಾಡಲಾಗುವುದು. ಅಲ್ಲದೆ ವಿದ್ಯಾರ್ಥಿಗಳು ಮತ್ತು ಹೆತ್ತವರಿಗಾಗಿ ಹಲವು ವಿಷಯದ ಕುರಿತು ಕಾರ್ಕಳದ ಕ್ರಿಯೇಟಿವ್ ಶಿಕ್ಷಣ ಪ್ರತಿಷ್ಠಾನದ ಸಹ ಸಂಸ್ಥಾಪಕ ಅಶ್ವತ್ ಎಸ್.ಎಲ್., ಮಾರ್ಗದರ್ಶನ ನೀಡಲಿದ್ದಾರೆ. ಮಂಗಳೂರು ವಿವಿ ಕುಲಪತಿ ಪ್ರೊ.ಪಿ.ಎಲ್.ಧರ್ಮ ಉದ್ಘಾಟಿಸಲಿದ್ದಾರೆ. ಈ ಕಾರ್ಯಕ್ರಮ ದಲ್ಲಿ ಭಾಗವಹಿಸಲು ಆಸಕ್ತಿ ಇರುವ ವಿದ್ಯಾರ್ಥಿಗಳು/ಪೋಷಕರು ಮೊ.ಸಂ: 7760706269, 9742937692ನ್ನು ಸಂಪರ್ಕಿಸಬಹುದು ಎಂದು ಪ್ರಕಟನೆ ತಿಳಿಸಿದೆ.