×
Ad

ಜೆಡಿಎಸ್ ನಾಯಕಿ ಜಯಲಕ್ಷ್ಮಿ ಎಸ್.ಹೆಗ್ಡೆ ನಿಧನ

Update: 2023-10-12 18:57 IST

ಮಂಗಳೂರು, ಅ.12: ದ.ಕ.ಜಿಲ್ಲಾ ಜಾತ್ಯತೀತ ಜನತಾದಳದ ಮಹಿಳಾ ಘಟಕದ ಅಧ್ಯಕ್ಷೆ ಬೈದಾವು ಗುತ್ತು ಜಯಲಕ್ಷ್ಮಿ ಎಸ್. ಹೆಗ್ಡೆ (83) ಅಲ್ಪ ಕಾಲದ ಅಸೌಖ್ಯದಿಂದ ಗುರುವಾರ ನಗರದ ಖಾಸಗಿ ಆಸ್ಪತ್ರೆಯಲ್ಲಿ ನಿಧನ ಹೊಂದಿದರು.

ಮೃತರು ಮೂವರು ಪುತ್ರರು ಹಾಗೂ ಪುತ್ರಿ ಮತ್ತು ಅಪಾರ ಬಂಧು ಬಳಗವನ್ನ ಅಗಲಿದ್ದಾರೆ.

ಅಡ್ಯಾರು ಮಹಿಳಾ ಮಂಡಲದ ಅಧ್ಯಕ್ಷರಾಗಿ 40 ವರ್ಷ ಸೇವೆ ಸಲ್ಲಿಸಿದ್ದ ಅವರು ಬಂಟರ ಯಾನೆ ನಾಡವರ ಮಾತೃ ಸಂಘದ ಕಾರ್ಯಕಾರಿ ಸಮಿತಿಯ ಉಪಾಧ್ಯಕ್ಷರಾಗಿಯು ಕರ್ತವ್ಯ ನಿರ್ವಹಿಸಿದ್ದರು. ಅಡ್ಯಾರು ಗ್ರಾಪಂನಲ್ಲಿ ಎರಡು ಅವಧಿಗೆ ಸದಸ್ಯರಾಗಿ ಮತ್ತು ಒಂದು ಅವಧಿಗೆ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದರು.

ರಾಜ್ಯ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಸಲಹಾ ಮಂಡಳಿಯಲ್ಲಿ ನಿರ್ದೇಶಕರಾಗಿ, ಅಡ್ಯಾರು ಪ್ರಾಥಮಿಕ ಆರೋಗ್ಯ ಕೇಂದ್ರದ ಅಧ್ಯಕ್ಷರಾಗಿ, ಕಂಕನಾಡಿಯ ಪ್ರಜ್ಞ ಸಲಹಾ ಕೇಂದ್ರ, ವಸತಿ ಗೃಹ ಸಮಿತಿಯ ಸದಸ್ಯರಾಗಿ, ಶಿಶು ಪಾಲನಾ ಕೇಂದ್ರದ ದ.ಕ. ಜಿಲ್ಲಾ ಉಪಾಧ್ಯಕ್ಷರಾಗಿ ಕರ್ತವ್ಯ ನಿರ್ವಹಿಸಿದ್ದರು. ಅಡ್ಯಾರು, ಅರ್ಕುಳ ಸಹಿತ ಹಲವು ಕಡೆ ಅಂಗನವಾಡಿ ಕೇಂದ್ರ ಸ್ಥಾಪನೆಗೆ ಶ್ರಮಿಸಿದ್ದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News