×
Ad

ಜೋಕಟ್ಟೆ : ಅಂಜುಮಾನ್‌ನಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳ ಮಾಹಿತಿ ಕಾರ್ಯಾಗಾರ

Update: 2023-09-24 21:44 IST

ಮಂಗಳೂರು: ಜೋಕಟ್ಟೆಯ ಅಂಜುಮಾನ್ ಸಮೂಹ ವಿದ್ಯಾಸಂಸ್ಥೆ ಹಾಗೂ ದ.ಕ.-ಉಡುಪಿ ಜಿಲ್ಲಾ ಮೀಫ್ ಮತ್ತು ಏಸ್- ಐಎಎಸ್ ಅಕಾಡಮಿ ಮಂಗಳೂರು ಇದರ ವತಿಯಿಂದ ಸ್ಪರ್ಧಾತ್ಮಕ ಪರೀಕ್ಷೆಗಳ ಮಾಹಿತಿ ಕಾರ್ಯಾಗಾರವು ಶನಿವಾರ ಅಂಜುಮಾನ್‌ನಲ್ಲಿ ನಡೆಯಿತು.

ಅಂಜುಮಾನ್ ಖುುವ್ವತುಲ್ ಇಸ್ಲಾಂ ಸಂಸ್ಥೆಯ ಅಧ್ಯಕ್ಷ ಹಾಜಿ ಬಿ.ಎ.ರಹೀಂ ಅಧ್ಯಕ್ಷತೆ ವಹಿಸಿದ್ದರು. ದಿಕ್ಸೂಚಿ ಭಾಷಣಗೈದ ಮೀಫ್ ಅಧ್ಯಕ್ಷ ಮೂಸಬ್ಬ ಪಿ. ಬ್ಯಾರಿ ‘ಮೀಫ್’ ಇತರ ಸಂಘ ಸಂಸ್ಥೆಗಳ ಸಹಯೋಗದೊಂದಿಗೆ ಸ್ಪರ್ಧಾತ್ಮಕ ಪರೀಕ್ಷೆಗಳ ಬಗ್ಗೆ ಸಕಾಲಕ್ಕೆ ವಿದ್ಯಾರ್ಥಿಗಳಿಗೆ ಮಾಹಿತಿ ನೀಡುವ ಮೂಲಕ ಜಾಗೃತಿ ಮೂಡಿಸುತ್ತಿವೆ ಎಂದರು.

ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತುದಾರ ಸೆಯ್ಯದ್ ಪಾಷಾ, ಸಂಪನ್ಮೂಲ ವ್ಯಕ್ತಿ ರಫೀಕ್ ಮಾಸ್ಟರ್ ಮಾಹಿತಿ ನೀಡಿದರು.

ವೇದಿಕೆಯಲ್ಲಿ ಅಂಜುಮಾನ್ ವಿದ್ಯಾಸಂಸ್ಥೆಗಳ ಸಂಚಾಲಕ ಹಾಜಿ ಬಿ.ಎಸ್. ಹುಸೈನ್, ಮೀಫ್ ಸಂಚಾಲಕ ಅನ್ವರ್ ಹುಸೈನ್ ಜಿ.ಎಂ ಐಎಎಸ್ ಅಕಾಡಮಿಯ ನಿರ್ದೇಶ ನಝೀರ್ ಅಹ್ಮದ್ ಉಪಸ್ಥಿತರಿದ್ದರು.

ಪ್ರಾಂಶುಪಾಲ ಹಬೀಬ್ ಉಪ್ಪಿನಂಗಡಿ ಸ್ವಾಗತಿಸಿದರು. ಉಪನ್ಯಾಸಕಿಯರಾದ ಮುಶೀಬಾ ವಂದಿಸಿದರು. ಶರ್ಮಿಳಾ ಕಾರ್ಯಕ್ರಮ ನಿರೂಪಿಸಿದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News