ಜು.25: ಉಸ್ತುವಾರಿ ಸಚಿವರ ಪರಿಷ್ಕೃತ ಪ್ರವಾಸ
ಮಂಗಳೂರು, ಜು.24:ದ.ಕ.ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಜು.25ರಂದು ಜಿಲ್ಲೆಗೆ ಆಗಮಿಸಲಿದ್ದಾರೆ. ಬೆಳಗ್ಗೆ 6:55ಕ್ಕೆ ಮಂಗಳೂರು ವಿಮಾನ ನಿಲ್ದಾಣಕ್ಕೆ ಆಗಮನ, 8ಕ್ಕೆ ಸರ್ಕ್ಯೂಟ್ ಹೌಸ್‌ನಲ್ಲಿ ಸಾರ್ವಜನಿಕರಿಂದ ಅಹವಾಲು ಸ್ವೀಕಾರ, 10ಕ್ಕೆ ಉರ್ವಸ್ಟೋರ್‌ನಲ್ಲಿ ಡಿ.ದೇವರಾಜ ಅರಸು ಭವನದ ನೂತನ ಕಟ್ಟಡ ಉದ್ಘಾಟನೆ, ಇಂದಿರಾ ಗಾಂಧಿ ಮಹಿಳಾ ನರ್ಸಿಂಗ್ ವಿದ್ಯಾರ್ಥಿ ನಿಲಯದ ನೂತನ ಕಟ್ಟಡ ಉದ್ಘಾಟನೆ, ಡಿ. ದೇವರಾಜ ಅರಸು ಮೆಟ್ರಿಕ್ ನಂತರದ ಬಾಲಕಿಯರ ವಿದ್ಯಾರ್ಥಿ ನಿಲಯದ ಶಿಲಾನ್ಯಾಸ , ಮಾದರಿ ಮೆಟ್ರಿಕ್ ನಂತರದ ಬಾಲಕಿಯರ ವಿದ್ಯಾರ್ಥಿ ನಿಲಯದ ಶಿಲಾನ್ಯಾಸ ನೆರವೇರಿಸುವರು.
ಬೆಳಗ್ಗೆ 10:30ಕ್ಕೆ ನಗರದ ಕುದ್ಮುಲ್ ರಂಗರಾವ್ ಪುರಭವನದಲ್ಲಿ ಜಿಲ್ಲೆಯ ಧಾರ್ಮಿಕ ದತ್ತಿ ಇಲಾಖೆಗೆ ಒಳಪಡುವ ದೇವಸ್ಥಾನಗಳ ವ್ಯವಸ್ಥಾಪನಾ ಸಮಿತಿಗಳ ಸಮಾಲೋಚನಾ ಸಭೆ ನಡೆಸುವರು. ಮಧ್ಯಾಹ್ನ 12:30ಕ್ಕೆ ಹಳೆ ಜಿಲ್ಲಾಧಿಕಾರಿ ಕಚೇರಿ ಆವರಣದ ಇಂಡಿಯನ್ ರೆಡ್‌ಕ್ರಾಸ್ ಸೊಸೈಟಿ ಶತಮಾನೋತ್ಸವ ಭವನಕ್ಕೆ ಭೇಟಿ ನೀಡುವರು. ಅಪರಾಹ್ನ 3:15ಕ್ಕೆ ಕಡಬ ಬ್ಲಾಕ್ ಕಾಂಗ್ರೆಸ್ ಕಾರ್ಯಕರ್ತರೊಂದಿಗೆ ಸಭೆ ನಡೆಸುವರು. ರಾತ್ರಿ 10:45ಕ್ಕೆ ಮಂಗಳೂರಿನಿಂದ ಬೆಂಗಳೂರಿಗೆ ತೆರಳಲಿದ್ದಾರೆ ಎಂದು ಪ್ರಕಟನೆ ತಿಳಿಸಿದೆ.