×
Ad

ಜು.26: ನಿಟ್ಟೆ ತಾಂತ್ರಿಕ ಮಹಾವಿದ್ಯಾಲಯದ ಪದವಿ ಪ್ರದಾನ ಸಮಾರಂಭ

Update: 2025-07-25 20:15 IST

ಕಾರ್ಕಳ: ನಿಟ್ಟೆ ಮಹಾಲಿಂಗ ಅಡ್ಯಂತಾಯ ಸ್ಮಾರಕ ತಾಂತ್ರಿಕ ಮಹಾವಿದ್ಯಾಲಯದ 17ನೇ ಪದವಿಪ್ರದಾನದ ಸೆಶನ್-1 ಸಮಾರಂಭವು ಜುಲೈ 26 ರಂದು ಬೆಳಿಗ್ಗೆ 10 ಗಂಟೆಗೆ ನಿಟ್ಟೆಯ ಬಿ.ಸಿ. ಅಳ್ವ ಕ್ರೀಡಾ ಸಂಕೀರ್ಣದ ಸದಾನಂದ ಸಭಾಂಗಣದಲ್ಲಿ ಜರಗಲಿದೆ.

2025ನೇ ಸಾಲಿನಲ್ಲಿ ಬಿ.ಇ ಪದವೀಧರರಾದ ಬಯೋಟೆಕ್ನಾಲಜಿ, ಸಿವಿಲ್ ಎಂಜಿನಿಯರಿಂಗ್, ಕಂಪ್ಯೂಟರ್ ಅಂಡ್ ಕಮ್ಯುನಿಕೇಶನ್ ಎಂಜಿನಿಯರಿಂಗ್, ಕಂಪ್ಯೂಟರ್ ಸೈನ್ಸ್ ಅಂಡ್ ಎಂಜಿನಿಯರಿಂಗ್, ಮೆಕ್ಯಾನಿಕಲ್ ಎಂಜಿನಿಯರಿಂಗ್ ಮತ್ತು ರೊಬೋಟಿಕ್ಸ್ ಅಂಡ್ ಆರ್ಟಿಫಿಷಿಯಲ್ ಇಂಟೆಲಿಜೆನ್ಸ್ ವಿಭಾಗದ ವಿದ್ಯಾರ್ಥಿಗಳ ಪದವಿಪ್ರದಾನವನ್ನು ಈ ಸಮಾರಂಭದಲ್ಲಿ ಆಯೋಜಿಸಲಾಗಿದೆ.

ಜೇ.ಪಿ.ಮಾರ್ಗನ್, ನ್ಯೂಯಾರ್ಕ್‌ನ ಮುಖ್ಯ ತಾಂತ್ರಿಕ ಅಧಿಕಾರಿ (CTO) ಶ್ರೀ ಸುರೇಶ್ ಶೆಟ್ಟಿ ಅವರು ಈ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಪದವಿಪ್ರದಾನ ಭಾಷಣವನ್ನು ನೀಡಲಿದ್ದಾರೆ. ನಿಟ್ಟೆ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಹಾಗೂ ನಿಟ್ಟೆ ಪರಿಗಣಿತ ವಿಶ್ವವಿದ್ಯಾಲಯದ ಕುಲಾಧಿಪತಿ ಶ್ರೀ ಎನ್. ವಿನಯ ಹೆಗ್ಡೆ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಲಿದ್ದಾರೆ.

ನಿಟ್ಟೆ ಪರಿಗಣಿತ ವಿಶ್ವವಿದ್ಯಾಲಯದ ತಾಂತ್ರಿಕ ಶಿಕ್ಷಣ ವಿಭಾಗದ ಉಪಾಧ್ಯಕ್ಷ ಡಾ. ಗೋಪಾಲ ಮುಗೆರಾಯ ಹಾಗೂ ನಿಟ್ಟೆ ಪರಿಗಣಿತ ವಿಶ್ವವಿದ್ಯಾಲಯದ ರಿಜಿಸ್ಟ್ರಾರ್ ಡಾ. ಹರ್ಷ ಹಾಲಹಳ್ಳಿ ಗೌರವ ಅತಿಥಿಗಳಾಗಿ ಭಾಗವಹಿಸುವರು. ಶೈಕ್ಷಣಿಕ ಸಾಧನೆ ಮಾಡಿದ ವಿದ್ಯಾರ್ಥಿಗಳಿಗೆ ಚಿನ್ನ ಹಾಗೂ ಬೆಳ್ಳಿ ಪದಕಗಳನ್ನು ಪ್ರದಾನ ಮಾಡಲಾಗುವುದು ಮತ್ತು ಎಲ್ಲ ಅರ್ಹ ಬಿ.ಇ ವಿದ್ಯಾರ್ಥಿಗಳಿಗೆ ಪ್ರಮಾಣಪತ್ರ ನೀಡಲಾಗುವುದು.

ಕಾರ್ಯಕ್ರಮವನ್ನು ಲೈವ್‌ಸ್ಟ್ರೀಮ್ ಮೂಲಕ ನೋಡಬಹುದಾಗಿದ್ದು, youtube.com/c/NMAMInstituteofTechnology ಲಿಂಕ್‌ ಮೂಲಕ ಸಾರ್ವಜನಿಕರಿಗೆ ಲಭ್ಯವಿದೆ ಎಂದು ಪ್ರಾಂಶುಪಾಲ ಡಾ. ನಿರಂಜನ್ ಎನ್. ಚಿಪ್ಳೂಣ್ಕರ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News