ಕಡಬ: ನಿರಂತರ ಮಳೆ; ತಾಲೂಕಿನ ಎಲ್ಲಾ ವಿದ್ಯಾ ಸಂಸ್ಥೆಗಳಿಗೆ ಜು.15 ರಂದು ರಜೆ
Update: 2025-07-15 08:32 IST
ಕಡಬ, ಜು.15. ಕಳೆದ ರಾತ್ರಿಯಿಂದ ನಿರಂತರ ಮಳೆ ಸುರಿಯುತ್ತಿರುವುದರಿಂದಾಗಿ ಕಡಬ ತಾಲೂಕಿನ ಶಾಲೆಗಳಿಗೆ ಜು.15 ಮಂಗಳವಾರದಂದು ರಜೆ ಘೋಷಿಸಲಾಗಿದೆ.
ಕಡಬ ತಾಲೂಕಿನಾದ್ಯಂತ ನಿರಂತರವಾಗಿ ಮಳೆ ಆಗುತ್ತಿರುವುದರಿಂದ ತಾಲೂಕಿನ ಎಲ್ಲಾ ಅಂಗನವಾಡಿ ಕೇಂದ್ರಗಳು, ಪ್ರಾಥಮಿಕ ಮತ್ತು ಪ್ರೌಢಶಾಲೆ, ಸರ್ಕಾರಿ ಅನುದಾನಿತ ಮತ್ತು ಖಾಸಗಿ ವಿದ್ಯಾ ಸಂಸ್ಥೆಗಳಿಗೆ ಜುಲೈ 15 ರಂದು ರಜೆ ಘೋಷಿಸಲಾಗಿದೆ ಎಂದು ಕಡಬ ತಹಶೀಲ್ದಾರರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.