×
Ad

ಕಡಬ: ಬಸ್‌ನಿಂದ ಬಿದ್ದು ಗಾಯಗೊಂಡಿದ್ದ ವೃದ್ಧ ಮೃತ್ಯು

Update: 2023-09-24 22:43 IST

ಕಡಬ, ಸೆ.24. ಚಲಿಸುತ್ತಿದ್ದ ಕೆಎಸ್ಸಾರ್ಟಿಸಿ ಬಸ್ಸಿನಿಂದ ಬಿದ್ದ ಪರಿಣಾಮ ವೃದ್ಧರೋರ್ವರು ಆಸ್ಪತ್ರೆಗೆ ಸಾಗಿಸುವ ಹಾದಿ ಮಧ್ಯೆ ಮೃತಪಟ್ಟು, ಇನ್ನೋರ್ವ ಸಣ್ಣಪುಟ್ಟ ಗಾಯಗಳೊಂದಿಗೆ ಅಪಾಯದಿಂದ ಪಾರಾದ ಘಟನೆ ರವಿವಾರ ಸಂಜೆ ಕಡಬದಲ್ಲಿ ನಡೆದಿದೆ.

ಮೃತ ವ್ಯಕ್ತಿಯನ್ನು ಕಡಬ ತಾಲೂಕಿನ ಗ್ರಾಮದ ಕಳಾರ ಸಮೀಪದ ಕುದ್ಕೋಳಿ ನಿವಾಸಿ ಅಚ್ಚುತ್ತ ಗೌಡ (63) ಎಂದು ಗುರುತಿಸಲಾಗಿದೆ. ಮೃತರು ರವಿವಾರ ಸಂಜೆ ಕಡಬದಿಂದ ಉಪ್ಪಿನಂಗಡಿ ಕಡೆಗೆ ತೆರಳುತ್ತಿದ್ದ ಕೆಎಸ್ಸಾರ್ಟಿಸಿ ಬಸ್ಸಿನಲ್ಲಿ ಮನೆಗೆ ಹೊರಟಿದ್ದ ವೇಳೆ ಅಂಚೆ ಕಚೇರಿಯ ಸಮೀಪದ ತಿರುವಿನಲ್ಲಿ ಅಚ್ಚುತ್ತ ಗೌಡ ಹಾಗೂ ಬಲ್ಯ ನಿವಾಸಿ ಚಂದ್ರಶೇಖರ ಎಂಬವರು ಬಸ್ಸಿನಿಂದ ರಸ್ತೆಗೆಸೆಯಲ್ಪಟ್ಟಿದ್ದಾರೆ. ಗಂಭೀರ ಗಾಯಗೊಂಡ ಅಚ್ಚುತ್ತ ಗೌಡರನ್ನು ಕಡಬ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಗಾಗಿ 108 ಆಂಬ್ಯುಲೆನ್ಸ್ ಮೂಲಕ ಪುತ್ತೂರು ಆಸ್ಪತ್ರೆಗೆ ಕರೆದೊಯ್ಯುತ್ತಿದ್ದ ವೇಳೆ ಹಾದಿ ಮಧ್ಯೆ ಮೃತಪಟ್ಟಿದ್ದಾರೆ. ಚಂದ್ರಶೇಖರ ಅವರು ಸಣ್ಣಪುಟ್ಟ ಗಾಯಗಳೊಂದಿಗೆ ಅಪಾಯದಿಂದ ಪಾರಾಗಿದ್ದಾರೆ.

ಈ ಬಗ್ಗೆ ಕಡಬ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News