×
Ad

ಕಡಬ | ಮೋರಿಗೆ ಬೈಕ್ ಢಿಕ್ಕಿ: ಶಾಲಾ ವಿದ್ಯಾರ್ಥಿ ಮೃತ್ಯು

Update: 2025-01-17 10:21 IST

ಕಡಬ, ಜ.17: ಸವಾರನ ನಿಯಂತ್ರಣ ತಪ್ಪಿದ ಬೈಕೊಂದು ಮೋರಿಗೆ ಢಿಕ್ಕಿ ಹೊಡೆದ ಪರಿಣಾಮ ಶಾಲಾ ವಿದ್ಯಾರ್ಥಿಯೋರ್ವ ಮೃತಪಟ್ಟ ದಾರುಣ ಘಟನೆ ಧರ್ಮಸ್ಥಳ - ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ಪೇರಡ್ಕ ಸಮೀಪ ಶುಕ್ರವಾರ ಬೆಳಗ್ಗೆ ನಡೆದಿದೆ.

ಮೃತ ಬಾಲಕನನ್ನು ಪೇರಡ್ಕದ ಖಾಸಗಿ ಶಾಲೆಯ ಹತ್ತನೇ ತರಗತಿ ವಿದ್ಯಾರ್ಥಿ, ನೂಜಿಬಾಳ್ತಿಲ ಗ್ರಾಮದ ಹೊಸಮನೆ ಕಾನ ನಿವಾಸಿ ವಿಶ್ವನಾಥ್ ಎಂಬವರ ಪುತ್ರ ಆಶಿಶ್(16) ಎಂದು ಗುರುತಿಸಲಾಗಿದೆ.

ಮನೆಯಿಂದ ಶಾಲೆಗೆ ತೆರಳುತ್ತಿದ್ದ ವೇಳೆ ಈ ದುರ್ಘಟನೆ ಸಂಭವಿಸಿದ್ದು, ಬಾಲಕನನ್ನು ಕಡಬದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಯಿತಾದರೂ, ಗಂಭೀರ ಗಾಯಗೊಂಡಿದ್ದ ಆತ ಆಸ್ಪತ್ರೆಗೆ ಸಾಗಿಸುವ ಹಾದಿ ಮಧ್ಯೆ ಮೃತಪಟ್ಟಿರುವುದಾಗಿ ತಿಳಿದುಬಂದಿದೆ.

ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿದುಬರಬೇಕಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News