×
Ad

ಕಡಬ: ಬೈಕ್‌ ಗೆ ಢಿಕ್ಕಿ ಹೊಡೆದು ಕಾರು ಚಾಲಕ ಪರಾರಿ

Update: 2023-08-15 15:03 IST

ಕಡಬ: ಆ.15. ಕಾರೊಂದು ಬೈಕ್‌ಗೆ ಢಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಗಾಯಗೊಂಡಿದ್ದು, ಕಾರು ಚಾಲಕ ನಿಲ್ಲಿಸದೇ ಪರಾರಿಯಾದ ಘಟನೆ ಉಪ್ಪಿನಂಗಡಿ-ಕಡಬ ರಾಜ್ಯ ಹೆದ್ದಾರಿಯ ಆತೂರಿನಲ್ಲಿ ಮಂಗಳವಾರದಂದು ನಡೆದಿರುವ ಬಗ್ಗೆ ವರದಿಯಾಗಿದೆ.

ಗಾಯಗೊಂಡ ವ್ಯಕ್ತಿಯನ್ನು ಆಲಂಕಾರು ಗ್ರಾಮದ ಕಕ್ವೆ ನಿವಾಸಿ ಸುಧಾಕರ ಎಂದು ಗುರುತಿಸಲಾಗಿದೆ. ಸುಧಾಕರ ಅವರು ಮನೆಯಿಂದ ಉಪ್ಪಿನಂಗಡಿಗೆ ಉಪ್ಪಿನಂಗಡಿ-ಕಡಬ ರಾಜ್ಯ ಹೆದ್ದಾರಿಯಲ್ಲಿ ಬೈಕ್‌ನಲ್ಲಿ ಹೋಗುತ್ತಿದ್ದ ವೇಳೆ ಆತೂರು ಅಶ್ವಿನಿ ಆಸ್ಪತ್ರೆ ಮುಂಭಾಗ ತಲುಪುತ್ತಿದ್ದಂತೆ ಹಿಂದಿನಿಂದ ಬಂದ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ಬೈಕ್‌ ಗೆ ಢಿಕ್ಕಿಯಾಗಿದೆ.

ಘಟನೆಯಲ್ಲಿ ಬೈಕ್ ಪಲ್ಟಿಯಾಗಿ ಸವಾರ ಸುಧಾಕರ ಅವರು ಕೆಳಕ್ಕೆ ಎಸೆಯಲ್ಪಟ್ಟು ಗಾಯಗೊಂಡಿದ್ದರು. ಕೂಡಲೇ ಸ್ಥಳೀಯರು ಅವರನ್ನು ಉಪಚರಿಸಿ ಕೊಯಿಲ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಕರೆದೊಯ್ದು ಚಿಕಿತ್ಸೆ ನೀಡಿದ್ದಾರೆ ಎಂದು ತಿಳಿದು ಬಂದಿದೆ.

ಢಿಕ್ಕಿಯಾದರೂ ಚಾಲಕ ಕಾರು ನಿಲ್ಲಿಸದೇ ಪರಾರಿಯಾಗಿದ್ದಾರೆ. ಘಟನೆ ಕುರಿತಂತೆ ಬೈಕ್ ಸವಾರ ಸುಧಾಕರ ಅವರು ಕಡಬ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಪರಾರಿಯಾದ ಕಾರಿನ ಗುರುತು ಪತ್ತೆಗಾಗಿ ಸ್ಥಳೀಯ ಅಂಗಡಿಯಲ್ಲಿನ ಸಿಸಿ ಟಿವಿ ಫೂಟೇಜ್‌ಗಳನ್ನು ಪರಿಶೀಲಿಸಲಾಗಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News