ಕಡಬ| ಚಾಲಕನ ನಿಯಂತ್ರಣ ತಪ್ಪಿ ಹಿಮ್ಮುಖವಾಗಿ ಚಲಿಸಿದ ಜೀಪ್; ವ್ಯಕ್ತಿ ಮೃತ್ಯು
Update: 2025-08-07 23:28 IST
ಕಡಬ: ಚಾಲಕನ ನಿಯಂತ್ರಣ ತಪ್ಪಿದ ಜೀಪೊಂದು ಹಿಮ್ಮುಖವಾಗಿ ಚಲಿಸಿದ ಪರಿಣಾಮ ಜೀಪಿನ ಹಿಂಬದಿಯಲ್ಲಿ ನಿಂತಿದ್ದ ವ್ಯಕ್ತಿಯೋರ್ವರು ಮೃತಪಟ್ಟ ಘಟನೆ ಕಡಬ ಠಾಣಾ ವ್ಯಾಪ್ತಿಯ ಬಿಳಿನೆಲೆ ಎಂಬಲ್ಲಿ ಗುರುವಾರ ನಡೆದಿದೆ.
ಮೃತ ವ್ಯಕ್ತಿಯನ್ನು ಬಿಳಿನೆಲೆ ನಿವಾಸಿ ಧರ್ಮಪಾಲ(68) ಎಂದು ಗುರುತಿಸಲಾಗಿದೆ. ಧರ್ಮಪಾಲರವರ ಪುತ್ರ ದಿನೇಶ್ ಜೀಪನ್ನು ಕಚ್ಚಾ ಮಣ್ಣು ರಸ್ತೆಯಲ್ಲಿ ಚಲಾಯಿಸುತ್ತಿದ್ದ ವೇಳೆ ಚಾಲಕನ ನಿಯಂತ್ರಣ ತಪ್ಪಿ ಹಿಮ್ಮುಖವಾಗಿ ಚಲಿಸಿ ಧರ್ಮಪಾಲರವರ ಮೇಲೆ ಮಗುಚಿ ಬಿದ್ದಿದೆ. ತಕ್ಷಣವೇ ಗಾಯಾಳುವನ್ನು ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ ಹಾದಿ ಮಧ್ಯೆ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ. ಈ ಬಗ್ಗೆ ಕಡಬ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.