ಕಡಬ | ಗೂಡ್ಸ್ ಟೆಂಪೊ ಢಿಕ್ಕಿ: ಪಾದಚಾರಿ ಮೃತ್ಯು
Update: 2025-12-30 00:00 IST
ಕಡಬ: ಗೂಡ್ಸ್ ಟೆಂಪೊ ಢಿಕ್ಕಿ ಹೊಡೆದ ಪರಿಣಾಮ ಪಾದಚಾರಿ ಯೊಬ್ಬರು ಮೃತಪಟ್ಟ ಘಟನೆ ಸೋಮವಾರ ಕಡಬ ಠಾಣಾ ವ್ಯಾಪ್ತಿಯ ಆತೂರಿನಲ್ಲಿ ನಡೆದಿದೆ.
ಮೃತರನ್ನು ಕಡಬ ತಾಲೂಕಿನ ಸುಂಕದಕಟ್ಟೆ ನಿವಾಸಿ ಅಬ್ದುಲ್ ಖಾದರ್ ಸಖಾಫಿ ಎಂದು ಗುರುತಿಸಲಾಗಿದೆ. ಇವರು ಕಾಸರಗೋಡಿನ ಮುಹಿಮ್ಮಾತ್ ಸಂಸ್ಥೆಯಲ್ಲಿ ಶಿಕ್ಷಕರಾಗಿ ಕರ್ತವ್ಯ ನಿರ್ವಹಿಸುತ್ತಿದ್ದರು.
ಸಂಬಂಧಿಕರ ಮದರಂಗಿ ಕಾರ್ಯಕ್ರಮಕ್ಕೆ ಮನೆಯವರ ಜೊತೆ ಬಂದಿದ್ದ ಇವರು ಆತೂರಿನಲ್ಲಿ ಬಸ್ಸಿನಿಂದ ಇಳಿದು, ಮನೆಯವರನ್ನು ರಿಕ್ಷಾದಲ್ಲಿ ಕಳುಹಿಸಿದ್ದರು. ಬಳಿಕ ಕಾರ್ಯಕ್ರಮಕ್ಕೆ ನಡೆದುಕೊಂಡು ಹೋಗುತ್ತಿದ್ದ ವೇಳೆ ಗೂಡ್ಸ್ ಟೆಂಪೊ ಢಿಕ್ಕಿ ಹೊಡೆದಿದೆ ಎನ್ನಲಾಗಿದೆ.
ಘಟನೆಯಲ್ಲಿ ಗಂಭೀರ ಗಾಯಗೊಂಡಿದ್ದ ಖಾದರ್ ಸಖಾಫಿಯವರನ್ನು ಸ್ಥಳೀಯರು ಪುತ್ತೂರು ಸರಕಾರಿ ಆಸ್ಪತ್ರೆಗೆ ಕರೆತಂದರು. ಪರಿಶೀಲಿಸಿದ ವೈದ್ಯರು ಅದಾಗಲೇ ಅವರು ಮೃತಪಟ್ಟಿರುವುದಾಗಿ ತಿಳಿಸಿದ್ದಾರೆ.
ಈ ಬಗ್ಗೆ ಕಡಬ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.