×
Ad

ಕಡಬ: ಶಸ್ತ್ರಚಿಕಿತ್ಸೆ ವೇಳೆ ಹೃದಯಾಘಾತ; ಯುವಕ ಮೃತ್ಯು

Update: 2024-11-02 12:13 IST

ಕಡಬ, ನ. 02. ಅನಾರೋಗ್ಯದ ಹಿನ್ನೆಲೆಯಲ್ಲಿ ಶಸ್ತ್ರಚಿಕಿತ್ಸೆ ನಡೆಯುತ್ತಿದ್ದ ವೇಳೆ  ಯುವಕನೋರ್ವ ಹೃದಯಾಘಾತದಿಂದ ಮೃತಪಟ್ಟ ಘಟನೆ ಮಂಗಳೂರಿನಲ್ಲಿ ಶನಿವಾರ ನಡೆದಿದೆ.

ಮೃತ ಯುವಕನನ್ನು ಕಡಬ ತಾಲೂಕಿನ ಕರ್ಮಾಯಿ ನಿವಾಸಿ ಜಾರ್ಜ್ ಎಂಬವರ ಪುತ್ರ ಜೈಸನ್ ಜಾರ್ಜ್ ಎಂದು ಗುರುತಿಸಲಾಗಿದೆ. ಅನಾರೋಗ್ಯದಿಂದ ಬಳಲುತ್ತಿದ್ದ ಈತನನ್ನು ಚಿಕಿತ್ಸೆಗಾಗಿ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಶನಿವಾರದಂದು ಶಸ್ತ್ರಚಿಕಿತ್ಸೆ ನಡೆಯುತ್ತಿದ್ದ ವೇಳೆ ಹೃದಯಾಘಾತದಿಂದ ಮೃತಪಟ್ಟಿರುವುದಾಗಿ ತಿಳಿದುಬಂದಿದೆ.

ಮೃತ ಜೈಸನ್ ತಂದೆ, ತಾಯಿ, ಸಹೋದರಿ ಸೇರಿದಂತೆ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News