ಕಡಬ | ಕುಂತೂರು ಶಾಲೆಯ ಮೇಲ್ಛಾವಣಿ, ಗೋಡೆ ಕುಸಿತ: ನಾಲ್ವರು ವಿದ್ಯಾರ್ಥಿಗಳಿಗೆ ಗಾಯ
Update: 2024-08-27 15:40 IST
ಕಡಬ, ಆ.27: ಸರಕಾರಿ ಶಾಲಾ ಕೊಠಡಿಯ ಗೋಡೆ ಹಾಗೂ ಮೇಲ್ಛಾವಣಿ ಕುಸಿದು ಬಿದ್ದ ಪರಿಣಾಮ ನಾಲ್ವರು ವಿದ್ಯಾರ್ಥಿಗಳು ಗಾಯಗೊಂಡ ಘಟನೆ ಮಂಗಳವಾರ ಮಧ್ಯಾಹ್ನ ಕುಂತೂರಿನಲ್ಲಿ ನಡೆದಿದೆ.
ಕುಂತೂರು ಸರಕಾರಿ ಶಾಲೆಯ ಕೊಠಡಿಯ ಮೇಲ್ಛಾವಣಿ ಹಾಗೂ ಗೋಡೆ ಏಕಾಏಕಿ ಕುಸಿದಿದೆ. ಅವಘಡದ ವೇಳೆ ಹೆಚ್ಚಿನ ವಿದ್ಯಾರ್ಥಿಗಳು ತರಗತಿ ಕೊಠಡಿಯಿಂದ ಹೊರಗಡೆ ಇದ್ದುದರಿಂದ ಪ್ರಾಣಾಪಾಯ ಸಂಭವಿಸಿಲ್ಲ. ನಾಲ್ವರು ವಿದ್ಯಾರ್ಥಿಗಳು ಸಣ್ಣಪುಟ್ಟ ಗಾಯಗಳೊಂದಿಗೆ ಪಾರಾಗಿದ್ದಾರೆ ಎಂದು ತಿಳಿದುಬಂದಿದೆ.
ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿದುಬರಬೇಕಿದೆ.