ಕಡಬ: ಸುಹಾಸ್ ಶೆಟ್ಟಿ ಹತ್ಯೆ ಖಂಡಿಸಿ ರಾಜ್ಯ ಹೆದ್ದಾರಿ ತಡೆ, ಪ್ರತಿಭಟನೆ
Update: 2025-05-02 10:28 IST
ಕಡಬ: ಬಜ್ಪೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ರೌಡಿ ಶೀಟರ್ ಸುಹಾಸ್ ಶೆಟ್ಟಿ ಹತ್ಯೆಯನ್ನು ಖಂಡಿಸಿ ಕಡಬದಲ್ಲಿ ಸಂಘ ಪರಿವಾರದ ಕಾರ್ಯಕರ್ತರು ರಾಜ್ಯ ಹೆದ್ದಾರಿ ತಡೆ ನಡೆಸಿ ಪ್ರತಿಭಟನೆ ನಡೆಸಿದರು.
ಕಡಬ ಶ್ರೀ ದುರ್ಗಾಂಬಿಕಾ ಅಮ್ಮನವರ ದೇವಸ್ಥಾನದ ವಠಾರದಲ್ಲಿ ಜಮಾಯಿಸಿದ ಪ್ರತಿಭಟನಾಕಾರರು ಬಳಿಕ ಸುಬ್ರಹ್ಮಣ್ಯ-ಉಪ್ಪಿನಂಗಡಿ ರಾಜ್ಯ ಹೆದ್ದಾರಿ ತಡೆ ನಡೆಸಿದರು. ರಸ್ತೆಯಲ್ಲಿ ಟಯರ್ ಗೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿದರು. ಕಡಬ ಪೋಲಿಸರು ಬಂದೋಬಸ್ತ್ ಕಲ್ಪಿಸಿದ್ದಾರೆ.
ಹತ್ಯೆ ಖಂಡಿಸಿ ವಿಶ್ವ ಹಿಂದೂ ಪರಿಷತ್ ನೀಡಿದ ಕರೆಯಂತೆ ಕಡಬ ಪೇಟೆಯಲ್ಲಿ ಶುಕ್ರವಾರ ಬೆಳಗ್ಗೆಯಿಂದ ಎಲ್ಲಾ ಅಂಗಡಿ ಮುಂಗಟ್ಟುಗಳನ್ನು ಮುಚ್ಚಿವೆ.