ಕಡಬ : ಫೇಸ್‍ಬುಕ್‌ನಲ್ಲಿ ಪ್ರಚೋದನಕಾರಿ ಪೋಸ್ಟ್; ಪ್ರಕರಣ ದಾಖಲು
Update: 2025-08-31 12:04 IST
ಕಡಬ, ಆ.31. ಫೇಸ್‍ಬುಕ್ ನಲ್ಲಿ ಧಾರ್ಮಿಕ ಭಾವನೆಗಳಿಗೆ ಧಕ್ಕೆ ಬರುವಂತೆ ಮತ್ತು ಕೋಮು ಗಲಭೆಗೆ ಪ್ರಚೋದನೆ ನೀಡುತ್ತಿರುವ ಪೋಸ್ಟ್ ಹಾಕಿರುವ ಹಿನ್ನಲೆಯಲ್ಲಿ ಫೇಸ್‍ಬುಕ್ ಖಾತೆಯೊಂದರ ನಿರ್ವಾಹಕನ ವಿರುದ್ಧ ಕಡಬ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕಡಬದ ಅಬ್ದುಲ್ ಹಕೀಂ ಎಂಬವರು ತನ್ನ ಫೇಸ್‍ಬುಕ್ ಖಾತೆಯನ್ನು ಪರಿಶೀಲನೆ ನಡೆಸುತ್ತಿದ್ದ ಸಂದರ್ಭದಲ್ಲಿ "ಇಬ್ರಾಹಿಂ ಮಿತ್ತೋಡಿ ಎಕ್ಸ್ ಮುಸ್ಲಿಂ" ಎಂಬ ಫೇಸ್‍ಬುಕ್ ಖಾತೆಯಲ್ಲಿ ಧರ್ಮ ಧರ್ಮಗಳ ನಡುವೆ ದ್ವೇಷ ಉಂಟು ಮಾಡುವಂತೆ ಮಾಡಿ ಸಮಾಜದಲ್ಲಿ ಧಾರ್ಮಿಕ ಭಾವನೆಗಳಿಗೆ ಧಕ್ಕೆ ಬರುವಂತೆ ಹಾಗೂ ಕೋಮು ಗಲಭೆಗೆ ಪ್ರಚೋದನೆ ನೀಡುತ್ತಿರುವ ಪ್ರಚೋದನಕಾರಿ ಪೋಸ್ಟ್ ಮಾಡಿರುವುದು ಕಂಡು ಬಂದ ಹಿನ್ನೆಲೆಯಲ್ಲಿ ಕಡಬ ಠಾಣೆಗೆ ದೂರು ನೀಡಿದ್ದಾರೆ. ಈ ಬಗ್ಗೆ ಕಡಬ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಎಂದು ತಿಳಿದು ಬಂದಿದೆ.