×
Ad

ಜಗದೀಶ್ಚಂದ್ರ ಅಂಚನ್‌ಗೆ ಕನ್ನಡ ಪಯಸ್ವಿನಿ ಪ್ರಶಸ್ತಿ ಪ್ರದಾನ

Update: 2026-01-19 22:28 IST

ಮಂಗಳೂರು: ಕಾಸರಗೋಡು ಕನ್ನಡ ಭವನದ ರಜತ ಸಂಭ್ರಮದ ಅಂಗವಾಗಿ ನೀಡಿದ ಪ್ರತಿಷ್ಠಿತ ’ ಕನ್ನಡ ಪಯಸ್ವಿನಿ ಅಚೀವ್ ಮೆಂಟ್ ಅವಾರ್ಡ್- 2026 ಅಂತರ್ ರಾಜ್ಯ ಪ್ರಶಸ್ತಿಯನ್ನು ಕ್ರೀಡಾ ಅಂಕಣಕಾರ ಎಸ್. ಜಗದೀಶ್ಚಂದ್ರ ಅಂಚನ್ ಸೂಟರ್‌ಪೇಟೆ ರವಿವಾರ ಪ್ರದಾನ ಮಾಡಲಾಯಿತು.

ಎಸ್. ಜಗದೀಶ್ಚಂದ್ರ ಅಂಚನ್ ಕಾಸರಗೋಡು ನುಳ್ಳಿಪ್ಪಾಡಿಯಲ್ಲಿ ಕನ್ನಡ ಭವನ ರಜತ ಸಂಭ್ರಮ -ನಾಡು ನುಡಿ ಹಬ್ಬ ಕಾರ್ಯಕ್ರಮದಲ್ಲಿ ಈ ಪ್ರತಿಷ್ಠಿತ ಪ್ರಶಸ್ತಿಯನ್ನು ಸ್ವೀಕರಿಸಿದರು.

ಈ ಸಂದರ್ಭದಲ್ಲಿ ಕನ್ನಡ ಭವನ ಸ್ಥಾಪಕಾಧ್ಯಕ್ಷ ಕೆ.ವಾಮನ್ ರಾವ್, ನಿರ್ದೇಶಕ ಕೆ.ಎನ್.ವೆಂಕಟ್ರಮಣ ಹೊಳ್ಳ , ಕರ್ನಾಟಕ ಬ್ಯಾರಿ ಅಕಾಡೆಮಿಯ ಮಾಜಿ ಅಧ್ಯಕ್ಷೆ ಆಯಿಷಾ ಪೆರ್ಲ , ಶಿಕ್ಷಣ ತಜ್ಞ ವಿ.ಬಿ.ಕುಳವರ್ಮ , ಕನ್ನಡ ಸಾಹಿತ್ಯ ಪರಿಷತ್ ಕೇರಳ ಗಡಿನಾಡ ಘಟಕದ ಅಧ್ಯಕ್ಷ ಡಾ.ಜಯಪ್ರಕಾಶ್ ನಾರಾಯಣ ತೊಟ್ಟೆತ್ತೋಡಿ , ಸಾಹಿತಿ ಜಯಾನಂದ ಪೆರಾಜೆ, ಕಾಸರಗೋಡು ಜಿಲ್ಲಾ ಕನ್ನಡ ಮಾಧ್ಯಮ ಪತ್ರಕರ್ತರ ಕ್ಷೇಮಾಭಿವೃದ್ದಿ ಸಂಘದ ಅಧ್ಯಕ್ಷ ರವಿ ನಾಯ್ಕಾಪು , ಚುಟುಕು ಸಾಹಿತ್ಯ ಪರಿಷತ್ ಮೈಸೂರು ಜಿಲ್ಲಾಧ್ಯಕ್ಷೆ ರತ್ನಾ ಹಾಲಪ್ಪ ಗೌಡ , ಕನ್ನಡ ಭವನದ ಕೋಶಾಧಿಕಾರಿ ಸಂಧ್ಯಾರಾಣಿ ಟೀಚರ್, ಕಾರ್ಯದರ್ಶಿ ವಸಂತ್ ಕೆರೆಮನೆ ಮೊದಲಾದವರು ಉಪಸ್ಥಿತರಿದ್ದರು. 

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News