ದೇರಳಕಟ್ಟೆಯ ವಿದ್ಯಾರತ್ನ ಶಾಲೆಯಲ್ಲಿ ಕನ್ನಡ ರಾಜ್ಯೋತ್ಸವ
ಕೊಣಾಜೆ : ದೇರಳಕಟ್ಟೆ ವಿದ್ಯಾರತ್ನ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಕನ್ನಡ ರಾಜ್ಯೋತ್ಸವವನ್ನು ಸಂಸ್ಥೆಯ ಸಾಹಿತ್ಯ ವೇದಿಕೆ ವತಿಯಿಂದ ಶನಿವಾರ ಆಚರಿಸಲಾಯಿತು.
ವಿದ್ಯಾರತ್ನ ಆಂಗ್ಲ ಮಾಧ್ಯಮ ಶಾಲೆಯ ಸ್ಥಾಪಕ ಅಧ್ಯಕ್ಷರಾದ ಕೆ.ರವೀಂದ್ರ ಶೆಟ್ಟಿ ಉಳಿದೊಟ್ಟು ದೀಪ ಬೆಳಗಿಸಿ ತಾಯಿ ಭುವನೇಶ್ವರಿ ಭಾವ ಚಿತ್ರಕ್ಕೆ ಪುಷ್ಪರ್ಚಾಣೆ ಮಾಡಿ ಕಾರ್ಯಕ್ರಮಕ್ಕೆ ಚಾಲನೆ ನೀಡಿ, ಕನ್ನಡ ನಾಡಿನ ನೆಲ ಜಲದ ರಕ್ಷಣೆ ಮತ್ತು ನಮ್ಮ ಸಂಸ್ಕೃತಿಯನ್ನು ಉಳಿಸಿ ಬೆಳೆಸುವ ಜವಾಬ್ದಾರಿ ನಮ್ಮೆಲ್ಲರದ್ದು ಎಂದ ಅವರು, ವ್ಯವಹಾರಿಕಾವಾಗಿ ಇತರ ಭಾಷೆಗಳನ್ನು ಬಳಸಿದರೂ ಕನ್ನಡ ಭಾಷೆಯನ್ನು ನಾವು ಯಾವತ್ತೂ ಮರೆಯಬಾರದು ಎಂದರು.
ಈ ಸಂದರ್ಭದಲ್ಲಿ ಸಂಸ್ಥೆಯ ಕಾರ್ಯದರ್ಶಿ ಸೌಮ್ಯ ಆರ್.ಶೆಟ್ಟಿ, ಶಾಲಾ ಮುಖ್ಯೋಪಾಧ್ಯಯರಾದ ನಯೀಮ್ ಹಮೀದ್, ಸಹ ಶಿಕ್ಷಕರಾದ ರವಿಕುಮಾರ್ ಕೊಡಿ, ಶಾಲಾ ವಿದ್ಯಾರ್ಥಿ ನಾಯಕ ಭವಿತ್ ಸುವರ್ಣ, ಶಾಲಾ ಸಹ ಶಿಕ್ಷಕರು, ಶಿಕ್ಷಕೇತರ ವರ್ಗದವರು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
ಸಭಾ ಕಾರ್ಯಕ್ರಮದ ಬಳಿಕ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು. ವಿದ್ಯಾರ್ಥಿನಿ ಯುಕ್ತಿ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು. ಅನುಶ್ರೀ ವಂದಿಸಿದರು.