×
Ad

ಮಲ್ಪೆ: ಕನ್ನಡ ರಾಜ್ಯೋತ್ಸವ ಆಚರಣೆ

Update: 2025-11-13 23:38 IST

ಮಲ್ಪೆ: ಮಲ್ಪೆ ಗಾಂಧಿ ಶತಾಬ್ಧಿ ಸರಕಾರಿ ಮಾದರಿ ಕನ್ನಡ ಮತ್ತು ಆಂಗ್ಲ ಮಾಧ್ಯಮ ಹಿರಿಯ ಪ್ರಾಥಮಿಕ ಶಾಲೆಯ ವತಿಯಿಂದ ಕನ್ನಡ ರಾಜ್ಯೋತ್ಸವ ಆಚರಣೆ ನಡೆಯಿತು.

ಸಾಹಿತ್ಯ ಅಕಾಡೆಮಿಯ ಚಕೋರ ಸಾಹಿತ್ಯ ವೇದಿಕೆಯ ಉಡುಪಿ ಜಿಲ್ಲಾ ಸಂಚಾಲಕ ಹಾಗೂ ಕಾರ್ಕಳ ಭುವನೇಂದ್ರ ಕಾಲೇಜಿನ ಕನ್ನಡ ಉಪನ್ಯಾಸಕ ರಾಮಾಂಜಿ ಮಾತನಾಡಿದ, "ಕನ್ನಡ ಭಾಷೆ, ಸಂಸ್ಕೃತಿ ಉಳಿಯಲು ಕನ್ನಡ ಶಾಲೆಗಳ ಜೀವಂತಿಕೆ ಅತೀ ಅಗತ್ಯವಾಗಿದೆ. ವಿದ್ಯಾರ್ಥಿಗಳಲ್ಲಿ ಭಾಷಾಭಿಮಾನ ಮೂಡಿಸಲು ಶಿಕ್ಷಕರು ಶ್ರಮಿಸಬೇಕು" ಎಂದರು.

ಕಾರ್ಯಕ್ರಮ ಅಧ್ಯಕ್ಷತೆಯನ್ನು ಶಾಲಾ ಎಸ್‌ಡಿಎಂಸಿ ಅಧ್ಯಕ್ಷ ರವಿರಾಜ್ ವಹಿಸಿದ್ದರು. ಹಳೆ ವಿದ್ಯಾರ್ಥಿ ಮಂಜುನಾಥ್ ಕೊಳ ಉಪಸ್ಥಿತರಿದ್ದರು.

ಶಾಲಾ ಪ್ರಭಾರ ಮುಖ್ಯ ಶಿಕ್ಷಕಿ ಶ್ರೀಲತಾ ಸ್ವಾಗತಿಸಿದರು.

ದೈಹಿಕ ಶಿಕ್ಷಣ ಶಿಕ್ಷಕ ಪ್ರೇಮಾನಂದ ಕಾರ್ಯಕ್ರಮ ನಿರೂಪಿಸಿದರು. ಹಿರಿಯ ಗೌರವ ಶಿಕ್ಷಕಿ ಪೂರ್ಣಿಮಾ ವಂದಿಸಿದರು. ಬಳಿಕ ರಾಮಾಂಜಿ ಮಕ್ಕಳಿಗೆ ಕನ್ನಡದ ಹೆಸರಾಂತ ಕವಿಗಳ ಶಿಶು ಗೀತೆಗಳನ್ನು ಹಾಡಿ ಮಕ್ಕಳನ್ನು ರಂಜಿಸಿದರು.




 


Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News