×
Ad

ಕಣ್ಣೂರು ಆಂಗ್ಲ ಮಾಧ್ಯಮ ಶಾಲೆಯಲ್ಲಿ ‘Knowledge Expo’ ವಿಜ್ಞಾನ ವಸ್ತು ಪ್ರದರ್ಶನ

Update: 2025-12-30 22:03 IST

ಮಂಗಳೂರು: ಅಡ್ಯಾರ್ ಕಣ್ಣೂರಿನ ಕಣ್ಣೂರು ಆಂಗ್ಲ ಮಾಧ್ಯಮ ಶಾಲೆ ಹಾಗೂ ಮಹಿಳಾ ಪಿಯು ಕಾಲೇಜ್ ಆಶ್ರಯದಲ್ಲಿ ಪ್ರೌಢಶಾಲೆ ಮತ್ತು ಪಿಯುಸಿ ವಿದ್ಯಾರ್ಥಿಗಳಿಗಾಗಿ ಆಯೋಜಿಸಿದ್ದ ‘Knowledge Expo’ ವಿಜ್ಞಾನ ವಸ್ತು ಪ್ರದರ್ಶನ ಕಾರ್ಯಕ್ರಮವು ಡಿಸೆಂಬರ್ 25 ಮತ್ತು 26ರಂದು ನಡೆಯಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಂಸ್ಥೆಯ ಅಧ್ಯಕ್ಷ ಎಸ್. ಮೊಹಮ್ಮದ್ ವಹಿಸಿದ್ದರು. ದಕ್ಷಿಣ ಕನ್ನಡ ಜಿಲ್ಲಾ ಡಿಡಿಪಿಐ ಎಸ್. ಶಶಿಧರ್ ಅವರು ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ವಿಜ್ಞಾನ ಶಿಕ್ಷಣವು ವಿದ್ಯಾರ್ಥಿಗಳಲ್ಲಿ ತಾರ್ಕಿಕ ಚಿಂತನೆ, ಸೃಜನಶೀಲತೆ ಮತ್ತು ಸಂಶೋಧನಾ ಮನೋಭಾವವನ್ನು ಬೆಳೆಸಲು ಸಹಕಾರಿಯಾಗಿದೆ ಎಂದು ಅವರು ಹೇಳಿದರು.

ಯಾಸಿರ್ ಕಲ್ಲಡ್ಕ ಮುಖ್ಯ ಅತಿಥಿಯಾಗಿ ಪಾಲ್ಗೊಂಡು, ವಿದ್ಯಾರ್ಥಿಗಳು ತಾವೇ ತಯಾರಿಸಿದ ವೈಜ್ಞಾನಿಕ ಮಾದರಿಗಳ ಪ್ರದರ್ಶನ ಶ್ಲಾಘನೀಯವಾಗಿದೆ ಎಂದು ಅಭಿಪ್ರಾಯಪಟ್ಟರು. ಸಂಸ್ಥೆಯ ಸಂಚಾಲಕ ರಿಯಾಝ್ ಅಹಮದ್ ಕಣ್ಣೂರು ಪ್ರಾಸ್ತಾವಿಕ ಭಾಷಣ ಮಾಡಿದರು.

ವಿಜ್ಞಾನ ವಸ್ತು ಪ್ರದರ್ಶನಕ್ಕೆ ರಫೀಕ್ ಮಾಸ್ಟರ್ ಹಾಗೂ ಇಬ್ರಾಹಿಂ ಕಲೀಲ್ ಅವರು ತೀರ್ಪುಗಾರರಾಗಿ ಆಗಮಿಸಿದ್ದರು. ಈ ಸಂದರ್ಭದಲ್ಲಿ ಸಂಸ್ಥೆಯ ಕಾರ್ಯದರ್ಶಿ ಎಸ್. ಉಮರಬ್ಬ ಹಾಗೂ ಟ್ರಸ್ಟೀ ಬಿ. ಮೊಹಮ್ಮದ್ ಉಪಸ್ಥಿತರಿದ್ದರು.

ವಿದ್ಯಾರ್ಥಿಗಳನ್ನು Sciencia, Brain Freeze, Fairyland, Pathfinder ಮತ್ತು Transcend ಎಂಬ ಐದು ತಂಡಗಳಾಗಿ ವಿಭಜಿಸಿ, ತಾವೇ ತಯಾರಿಸಿದ ವಿವಿಧ ವೈಜ್ಞಾನಿಕ ಮಾದರಿಗಳನ್ನು ಪ್ರದರ್ಶಿಸಿದರು. ಪ್ರದರ್ಶನದಲ್ಲಿ Sciencia ತಂಡ ಪ್ರಥಮ ಸ್ಥಾನ ಪಡೆದುಕೊಂಡರೆ, Brain Freeze ತಂಡ ದ್ವಿತೀಯ ಸ್ಥಾನ ಗಳಿಸಿತು.

ಕಾರ್ಯಕ್ರಮದ ಆರಂಭದಲ್ಲಿ ಸಂಸ್ಥೆಯ ಕಾರ್ಯದರ್ಶಿ ಸಿತಾರ್ ಅಬ್ದುಲ್ ಮಜೀದ್ ಸ್ವಾಗತ ಭಾಷಣ ಮಾಡಿದರು. ವಿದ್ಯಾರ್ಥಿನಿ ನುಹೈಮ ಕಿರಾಅತ್ ಪಠಿಸಿದರು. ಮುಖ್ಯ ಅಧ್ಯಾಪಕಿ ಸಂಶಾದ್ ವಂದನಾರ್ಪಣೆ ಸಲ್ಲಿಸಿದರು. ಶಿಕ್ಷಕಿ ಜಯಲತಾ ಕಾರ್ಯಕ್ರಮವನ್ನು ನಿರೂಪಿಸಿದರು.







 



 



 


Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News