×
Ad

ಕಾರ್ಗಿಲ್ ವಿಜಯ ದಿವಸ ಆಚರಣೆ: ಹುತಾತ್ಮ ಯೋಧರಿಗೆ ಗೌರವ

Update: 2025-07-26 22:28 IST

ಮಂಗಳೂರು: ಕಾರ್ಗಿಲ್ ವಿಜಯ ದಿವಸದ ಅಂಗವಾಗಿ ಬಿಜೆಪಿ ಯುವ ಮೋರ್ಚಾ ಮಂಗಳೂರು ನಗರ ದಕ್ಷಿಣ ಮಂಡಲದ ವತಿಯಿಂದ ನಗರದ ಕದ್ರಿ ಪಾರ್ಕ್ ಬಳಿ ಯುದ್ಧ ಸ್ಮಾರಕದಲ್ಲಿ ಹುತಾತ್ಮ ಯೋಧರಿಗೆ ಗೌರವ ಸಲ್ಲಿಸಲಾಯಿತು.

ಈ ವೇಳೆ ಮಾತನಾಡಿದ ಶಾಸಕ ವೇದವ್ಯಾಸ ಕಾಮತ್ ‘ ಕಾರ್ಗಿಲ್ ವಿಜಯೋತ್ಸವವು ಇಡೀ ಭಾರತೀಯರಿಗೆ ಹೆಮ್ಮೆಯ ದಿನವೂ ಹೌದು. ಅದರ ಜೊತೆಗೆ ವೀರಯೋಧರನ್ನು ಕಳೆದುಕೊಂಡ ನೋವೂ ಇದೆ. ಈ ಯುದ್ಧದಲ್ಲಿ ಸೌರಭ್ ಕಾಲಿಯಾ, ವಿಕ್ರಮ್ ಭಾತ್ರ, ಜಸ್ವಿಂದರ್ ಸಿಂಗ್, ಮನೋಜ್ ಕುಮಾರ್ ಪಾಂಡೆಯರಂತಹ 527 ವೀರಕಲಿಗಳನ್ನು ಕಳೆದುಕೊಂಡಿದ್ದೇವೆ. ಈ ದಿನ ಅಂತಹ ಎಲ್ಲಾ ವೀರ ಯೋಧರ ಧೈರ್ಯವನ್ನು, ಅವರ ಕುಟುಂಬಗಳ ತ್ಯಾಗವನ್ನು ಪ್ರತಿಯೊಬ್ಬರೂ ನೆನಪು ಮಾಡಿಕೊಳ್ಳಬೇಕಾಗಿದೆ ಎಂದು ಹೇಳಿದರು.

ಈ ಸಂದರ್ಭದಲ್ಲಿ ರಮೇಶ್ ಕಂಡೆಟ್ಟು, ಲಲ್ಲೇಶ್ ಕುಮಾರ್, ರಮೇಶ್ ಹೆಗ್ಡೆ, ಪ್ರೇಮಾನಂದ ಶೆಟ್ಟಿ, ಪೂರ್ಣಿಮಾ, ಗಣೇಶ್ ಕಾರ್ಣಿಕ್, ರವಿಶಂಕರ್ ಮಿಜಾರ್, ಅಶ್ವಿತ್ ಕೊಟ್ಟಾರಿ, ನಿಕಟಪೂರ್ವ ಮ.ನ.ಪಾ ಸದಸ್ಯರುಗಳು, ಮಾಜಿ ಸೈನಿಕರು, ಮಂಡಲದ ಯುವ ಮೋರ್ಚಾದ ಎಲ್ಲಾ ಪದಾಧಿಕಾರಿಗಳು, ಜಿಲ್ಲಾ ಪ್ರಮುಖರು, ವಿವಿಧ ಮೋರ್ಚಾಗಳ ಪದಾಧಿಕಾರಿಗಳು, ಮಹಾಶಕ್ತಿ ಕೇಂದ್ರದ ಪ್ರಮುಖರು, ಶಕ್ತಿ ಕೇಂದ್ರದ ಪ್ರಮುಖರು, ಬೂತ್ ಪ್ರಮುಖರು, ಕಾರ್ಯಕರ್ತರು, ಸೇರಿದಂತೆ ಸಾರ್ವಜನಿಕರು ಉಪಸ್ಥಿತರಿದ್ದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News