×
Ad

ಕರ್ನಾಟಕ ರಾಜ್ಯೋತ್ಸವ: ವಾರ್ತಾಭಾರತಿಯ ಪುಷ್ಪರಾಜ್ ರಿಗೆ ದ.ಕ. ಜಿಲ್ಲಾ ಪ್ರಶಸ್ತಿ ಪ್ರದಾನ

Update: 2024-11-01 10:36 IST

ಮಂಗಳೂರು: ಕರ್ನಾಟಕ ರಾಜ್ಯೋತ್ಸವ ದಿನಾಚರಣೆ ಪ್ರಯುಕ್ತ ದ.ಕ. ಜಿಲ್ಲಾಡಳಿತದ ವತಿಯಿಂದ ನೀಡುವ 2024ನೇ ಜಿಲ್ಲಾ ಮಟ್ಟದ ಪ್ರಶಸ್ತಿಗೆ ಆಯ್ಕೆಯಾಗಿರುವ ಹಿರಿಯ ಪತ್ರಕರ್ತ, ವಾರ್ತಾಭಾರತಿ ಮಂಗಳೂರು ಬ್ಯೂರೋ ಮುಖ್ಯಸ್ಥ ಪುಷ್ಪರಾಜ್ ಬಿ.ಎನ್. ಅವರಿಗೆ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಪ್ರಶಸ್ತಿ ಪ್ರದಾನ ಮಾಡಿದರು.

ಮಂಗಳೂರಿನ ನೆಹರೂ ಮೈದಾನದಲ್ಲಿ ಇಂದು ಬೆಳಗ್ಗೆ ನಡೆದ ರಾಜ್ಯೋತ್ಸವ ಜಿಲ್ಲಾ ಮಟ್ಟದ ಕಾರ್ಯಕ್ರಮದಲ್ಲಿ ಪುಷ್ಪರಾಜ್ ಸಹಿತ 57 ಸಾಧಕರಿಗೆ ಹಾಗೂ 24 ಸಾಧಕ ಸಂಘ ಸಂಸ್ಥೆಗಳಿಗೆ ಪ್ರಶಸ್ತಿ ಪ್ರದಾನ ಮಾಡಲಾಯಿತು.

ಈ ಸಂದರ್ಭ ದ.ಕ. ಸಂಸದ ಕ್ಯಾ.ಬ್ರಿಜೇಶ್ ಚೌಟ, ಮಂಗಳೂರು ಮಹಾನಗರ ಪಾಲಿಕೆ ಮೇಯರ್ ಮನೋಜ್ ಕೋಡಿಕಲ್, ಶಾಸಕ ವೇದವ್ಯಾಸ ಕಾಮತ್, ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜ, ಕಸಾಪ ದ.ಕ. ಜಿಲ್ಲಾಧ್ಯಕ್ಷ ಡಾ.ಎಂ.ಪಿ.ಶ್ರೀನಾಥ್ ಮೊದಲಾದ ಗಣ್ಯರು ಉಪಸ್ಥಿತರಿದ್ದರು.

 

 

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News