×
Ad

ಕಾಟಿಪಳ್ಳ | ಸಿಡಿಲು ಬಡಿದು ಎರಡು ಮನೆಗಳಿಗೆ ಹಾನಿ: ಆರು ಮಂದಿಗೆ ಗಾಯ

Update: 2025-10-13 12:27 IST

ಪ್ರಾತಿನಿಧಿಕ ಚಿತ್ರ (ಕೃಪೆ: Meta AI)

ಸುರತ್ಕಲ್: ಎರಡು ಮನೆಗಳಿಗೆ ಸಿಡಿಲು ಬಡಿದು ಆರು ಮಂದಿ ಗಾಯಗೊಂಡಿರುವ ಘಟನೆ ಕಾಟಿಪಳ್ಳ 9ನೇ ಬ್ಲಾಕ್ ಮಧ್ಯದ ಗುರುನಗರ ಎಂಬಲ್ಲಿ ರವಿವಾರ ರಾತ್ರಿ ನಡೆದಿದೆ.

ಭಾರತಿ(30), ವಿನಯ(35), ಕುಸುಮ(55), ಹರಿಯಪ್ಪ(67), ರವಿಕಲಾ (60), ನಿತೀಶ್ (35) ಎಂಬವರು ಗಾಯಗೊಂಡಿದ್ದು, ಅವರನ್ನು ಕಾನದ ಮಿಸ್ಕಿತ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿದೆ ಎಂದು ತಿಳಿದು ಬಂದಿದೆ.

ಕಾಟಿಪಳ್ಳ 9ನೇ ಬ್ಲಾಕ್ ಪರಿಸರದಲ್ಲಿ ರವಿವಾರ ರಾತ್ರಿ ಏಕಾಏಕಿ ಸಿಡಿಲು ಗುಡುಗು ಸಹಿತ ಭಾರೀ ಮಳೆಯಾಗಿದೆ. ಈ ವೇಳೆ ಹರಿಯಪ್ಪ ಮತ್ತು ರವಿಕಲಾ ಎಂಬವರ ಮನೆಯ ವಿದ್ಯುತ್ ಸ್ವಿಚ್ ಬೋರ್ಡ್ ಗೆ ಸಿಡಿಲು ಬಡಿಯಿತೆನ್ನಲಾಗಿದೆ.

ಘಟನೆಯಿಂದ ಮನೆಯಲ್ಲಿದ್ದ ಎಲ್ಲಾ ಸ್ವಿಚ್ ಬೋರ್ಡ್ ಗಳು ಸುಟ್ಟು ಕರಕಲಾಗಿವೆ. ಮನೆಯ ನೆಲ, ಗೋಡೆ ಮತ್ತು ಮೇಲ್ಛಾವಣಿಗೆ ಹಾನಿಯಾಗಿದ್ದು, ಅಪಾರ ನಷ್ಟ ಸಂಭವಿಸಿದೆ ಎಂದು ತಿಳಿದು ಬಂದಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News